ಮೊಳಕಾಲ್ಮೂರು: ರೈತರಿಗೆ ಕಡಿಮೆ ದರದಲ್ಲಿ ಶೇಂಗಾ ನೀಡುವಂತೆ ಸಿಎಂ ಗೆ ಪತ್ರ ಬರೆದ ಸಚಿವ ಶ್ರೀರಾಮುಲು.!

ಚಿತ್ರದುರ್ಗ: ಮೊಳಕಾಲ್ಮೂರು ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶೇಂಗಾ ಬಿತ್ತನೆ ಬೀಜದ ದರವನ್ನು ಕಡಿಮೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲೆ ಸೇರಿದಂತೆ ಮೊಳಕಾಲ್ಮೂರು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ರೈತರು ಸಹ, ಜಮೀನುಗಳನ್ನು ಅಸನು ಮಾಡಿಕೊಂಡು ಶೇಂಗಾ ಬಿತ್ತನೆಗೆ ಸಜ್ಜಾಗಿದ್ದಾರೆ. ಆದರೆ, ಮಾರ್ಕೆಟ್ ನಲ್ಲಿ ಪ್ರತಿ ಕ್ವಿಂಟಲ್ ಗೆ 6 ಸಾವಿರದಿಂದ 7 ಸಾವಿರಕ್ಕೆ ಸಿಗುವ ಶೇಂಗಾ ಕೃಷಿ ಇಲಾಖೆಯಲ್ಲಿ 8 ಸಾವಿರದ 100 ರೂ. ಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ದೂರು ಕೇಳಿಬಂದ ಹಿನ್ನೆಲೆಯಲ್ಲಿ, ಸಚಿವ ಶ್ರೀರಾಮುಲು ಕೊರೋನಾ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕಡಿಮೆ ದರದಲ್ಲಿ ಬಿತ್ತನೆ ಬೀಜ ನೀಡಿ, ರೈತಾಪಿ ವರ್ಗಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend