;

ಮೊಳಕಾಲ್ಮೂರು: ತಾಲೂಕಿನಲ್ಲಿ ಇಂದು 10 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.!!

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನಲ್ಲಿ (ಜೂ,9) ಇಂದು 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಚಿತ್ರದುರ್ಗ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಯಿಂದ ತಿಳಿದುಬಂದಿದೆ. ಮೊಳಕಾಲ್ಮುರು ಪಟ್ಟಣ ಸೇರಿದಂತೆ, ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಇಂದು ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಮೊಗಲಹಳ್ಳಿ 4, ಕೊಂಡ್ಲಹಳ್ಳಿ 2, ಕಾಟನಾಯಕನಹಳ್ಳಿ 1, ಮುದ್ದಯ್ಯನಹಟ್ಟಿ 1, ರಾಂಪುರ 1, ಯರ್ರೇನಹಳ್ಳಿ 1, ಸೇರಿ ಒಟ್ಟು ತಾಲೂಕಿನಲ್ಲಿ 10 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಮೊಳಕಾಲ್ಮೂರು ಮುರಾರ್ಜಿ ಹಾಗೂ ಆದರ್ಶ ಶಾಲೆ ಕಟ್ಟಡದ ಕೋವಿಡ್ ಕೇರ್ ಸೆಂಟರ್ ನಲ್ಲಿ, ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ, ಉಸಿರಾಟದ ತೊಂದರೆ ಇರುವ ಸೋಂಕಿತರನ್ನು ರಾಂಪುರ ಹಾಗೂ ಮೊಳಕಾಲ್ಮೂರು ಕೋವಿಡ್ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;