ಸಿಂಧನೂರು : “ಕೊವಿಡ್ 19
ಲಸಿಕಾ ಮೇಳ “ಭೂತಲದಿನ್ನಿ ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು, ಜಿಲ್ಲಾ ಪಂಚಾಯತ್ ರಾಯಚೂರು ಸಹಯೋಗದಲ್ಲಿ ಕೇಂದ್ರ ಸರ್ಕಾರವು ಇಂದಿನಿಂದ 18 ವರ್ಷ ಹಾಗೂ ಮೇಲ್ಪಟ್ಟ ವಯಸ್ಸಿನ ಪ್ರತಿಯೊಬ್ಬರಿಗೂ ಕೋವಿಡ್19 ಲಸಿಕೆ ನೀಡುವ ಬೃಹತ್ ಅಭಿಯಾನವನ್ನು ಪ್ರಾರಂಭಿಸಿದ್ದು, ಸೋಂಕಿನಿಂದ ಜನರನ್ನು ರಕ್ಷಿಸಲು ಮತ್ತು ಭಾರತವನ್ನು ಕೊರೋನಾ ಮುಕ್ತವಾಗಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಣಯ.ಲಸಿಕೆ ಸಂಪೂರ್ಣ ಸುರಕ್ಷಿತ ಹಾಗೂ ಸೋಂಕಿನ ವಿರುದ್ಧ ಹೋರಾಡಲು ಸಮರ್ಥವಾಗಿದ್ದು 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ತಪ್ಪದೇ ಲಸಿಕೆ ಪಡೆದುಕೊಳ್ಳಿ. ಲಸಿಕೆ ಹಾಕಿಸಿಕೊಳ್ಳಿ, ಸುರಕ್ಷಿತವಾಗಿರಿ ಲಸಿಕೆಗಳು ಸುರಕ್ಷಿತ, ಲಸಿಕೆ ಬಗ್ಗೆ ವದಂತಿಗಳಿಗೆ ಲಕ್ಷ್ಯಕೊಡಬೇಡಿ. ಈ ಲಸಿಕೆ ಪಡೆದ ನಂತರವೂ ಸಹ ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೆ ಪಾಲಿಸಿ.ಎಂದು ನೋಡಲ್ ಅಧಿಕಾರಿ ಬಸವರಾಜು ಸೂಗೂರ ಎ. ಇ. ಇ. ನೀರಾವರಿ ಇಲಾಖೆ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ನಿಂಗಪ್ಪ ಹೊಸಮನಿ, ಸಿ.ಎಚ್.ಓ.ದಿಪೀಕಾ, ನಭಿನಾ ಭೂತಲದಿನ್ನಿ ಗ್ರಾಮ ಲೆಕ್ಕಾದಿಕಾರಿ ಕೋಟ್ರೆಶ್ ,ಕಲ್ಲೂರು ಗ್ರಾಮ ಲೆಕ್ಕದಿಕಾರಿ ರಷ್ಯಾ, ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಸಿದ್ದರು..

ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
