ಹೂಡೇಂ: ಗ್ರಾಮ ಪಂಚಾಯಿತಿಯಲ್ಲಿ 3ನೇ ಅಲೆ ಕೋವಿಡ್-19 ಪೂರ್ವ ಬಾವಿ ಸಭೆ.!

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯತಿಯಲ್ಲಿ ಇಂದು (ಜೂ,23) 3ನೇ ಅಲೆ ಕೋವಿಡ್-19 ಪೂರ್ವ ಬಾವಿ ಸಭೆ ಜರುಗಿತು. 18 ವರ್ಷ ಮೇಲ್ಪಟ್ಟ ವಯಸ್ಸಿನ ಪ್ರತಿಯೊಬ್ಬರಿಗೂ ಕೋವಿಡ್19 ಲಸಿಕೆ ನೀಡುವ ಬೃಹತ್ ಅಭಿಯಾನವನ್ನು ಪ್ರಾರಂಭಿಸಿದ್ದು, ಸೋಂಕಿನಿಂದ ಜನರನ್ನು ರಕ್ಷಿಸಲು ಮತ್ತು ಭಾರತವನ್ನು ಕೊರೋನಾ ಮುಕ್ತವಾಗಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಣಯ. ಲಸಿಕೆ ಸಂಪೂರ್ಣ ಸುರಕ್ಷಿತ ಹಾಗೂ ಸೋಂಕಿನ ವಿರುದ್ಧ ಹೋರಾಡಲು ಸಮರ್ಥವಾಗಿದ್ದು 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ, ಸುರಕ್ಷಿತವಾಗಿರಿ ಲಸಿಕೆಗಳು ಸುರಕ್ಷಿತ, ಲಸಿಕೆ ಬಗ್ಗೆ ವದಂತಿಗಳಿಗೆ ಕಿವಿ ಕೊಡಬಾರದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಕೆ ಮಾರೇಶ ಅವರು ಈ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀ ಕೆ ಎನ್ ರಾಘವೇಂದ್ರ ಇವರು ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡರು. ಗ್ರಾ.ಪಂ. ಸದಸ್ಯರುಗಳಾದ ಸುಂದ್ರಮ್ಮ ಮಲ್ಲಿಕಾರ್ಜುನ, ನಾಗಮ್ಮ ಗದ್ದಿ ಸ್ವಾಮಿ, ಗ್ರಾ.ಪಂ.ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾ.ಪಂ ಸಿಬ್ಬಂದಿ ವರ್ಗದವರು ಈ ಸಭೆಯಲ್ಲಿ ಹಾಜರಿದ್ದರು..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend