ಮೊಳಕಾಲ್ಮೂರು: ಕೋವಿಡ್ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ.!!

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಿಂದ ಕೋವಿಡ್ ಮೂರನೇ ತಡೆಗಟ್ಟುವ ನಿಟ್ಟಿನಲ್ಲಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಟಿ ಸುರೇಶ್ ಕುಮಾರ್ ಮಾತನಾಡಿ ತಾಲೂಕಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ತ್ವರಿತಗತಿಯಲ್ಲಿ ಕೋವಿಡ್ ಲಸಿಕೆ ನೀಡಬೇಕು. ತಜ್ಞರ ಅಭಿಪ್ರಾಯ ಆಧಾರದಮೇಲೆ ಮೂರನೇ ಅಲೆ ಬರಲಿದ್ದು ಕೋವಿಡ್ ತಡೆಗಾಗಿ ತಾಲೂಕಿನಲ್ಲಿ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸೋಂಕಿತ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಉಳಿದುಕೊಳ್ಳಲು ತಯಾರಿ ನಡೆಸಬೇಕು. ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ಭಾಧಿತರಾಗುವುದರಿಂದ ಮಾನವ ಸಂಪನ್ಮೂಲ ತರಬೇತಿ ನೀಡಿ ಮಕ್ಕಳಿಗೆ ಚಿಕಿತ್ಸೆ ಸೂಕ್ತ ನೀಡುವವರಿಗೆ ಅಗತ್ಯ ಸಲಹೆ ಸೂಚನೆ ನೀಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಓ ಜಾನಕಿರಾಮ್ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಶ್ರೀಮತಿ ಸುಧಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend