ತಾಯಕನಹಳ್ಳಿ: ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ; ಇಓ ಜಿ.ಎಂ ಬಸಣ್ಣ ಅವರು ಪರಿಶೀಲನೆ.!!

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದಲ್ಲಿ ಇಂದು (ಜುಲೈ-2) 52 ಜನ ಕೂಲಿಕಾರರು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಾಮಗಾರಿಯ ಸ್ಥಳಕ್ಕೆ ತಾ.ಪಂ ಅಧಿಕಾರಿಗಳಾದ ಜಿ.ಎಂ ಬಸಣ್ಣ ಅವರು ಭೇಟಿನೀಡಿ. ಕಾಮಗಾರಿ ಪರಿಶೀಲನೆ ನಡೆಸಿದರು. ಕೂಲಿ ಕಾರ್ಮಿಕರಿಗೆ ಅವರ ಕರ್ತವ್ಯಗಳ ಕುರಿತು ಹಾಗೂ ಯೋಜನೆಯ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಹೂಡೇಂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಾರೇಶ್ ಅವರು, ತಾಪಂ ಮಟ್ಟದ ಅಧಿಕಾರಿಗಳು ಹಾಗೂ ನೆರೆಗಾ ಇಂಜಿನಿಯರ್ ಹೇಮಂತ್, ಅಧ್ಯಕ್ಷರಾದ ಕರಿಬಸಮ್ಮ ದುರುಗಪ್ಪ ಮತ್ತು ಉಪಾಧ್ಯಕ್ಷರಾದ ಕೆ ಎನ್ ರಾಘವೇಂದ್ರ, ಗ್ರಾ.ಪಂ ಸದಸ್ಯರುಗಳು, ಗ್ರಾ.ಪಂ ಸಿಬ್ಬಂದಿ ವರ್ಗದವರು, ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend