ಮೊಳಕಾಲ್ಮುರು: ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ರಾಮ್ ರವರ 35 ನೇ ಪುಣ್ಯಸ್ಮರಣೆ.!

ಚಿತ್ರದುರ್ಗ: ಮೊಳಕಾಲ್ಮುರು: ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಇಂದು (ಜು,6) ರಂದು ಡಾ.ಬಾಬು ಜಗಜೀವನ್ ರಾಮ್ ರವರ 35 ನೇ ಪುಣ್ಯಸ್ಮರಣೆ ಕಾರ್ಯಕ್ರಮ ದಲಿತ ಸಮುದಾಯದಲ್ಲಿ ಜನಿಸಿ ಅನೇಕ ಹೋರಾಟಗಳ ಮೂಲಕ ಅವರದೇ ಆದ ಕೊಡುಗೆಯನ್ನು ದೇಶಕ್ಕೆ ನೀಡಿದ ಮಹಾನ್ ವ್ಯಕ್ತಿ ಎಂದರೆ ಬಾಬು ಜಗಜೀವನ್‌ರಾಮ್ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಿ.ಚಿದಾನಂದಪ್ಪ ತಿಳಿಸಿದರು. ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ್ ರಾಮ್ ಅವರ 35 ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಗಜೀವನ್‌ರಾಮ್ ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲದೆ ಸಮಾಜಸೇವಕರು ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು, ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿ ಮತ್ತು ಮುರಾರ್ಜಿ ದೇಸಾಯಿ ಅವರ ಆಡಳಿತಾವಧಿಯಲ್ಲಿ ಭಾರತದ ಉಪ ಪ್ರಧಾನಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ
ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ನಿವೃತ್ತ ಸಹಾಯಕ ನಿರ್ದೇಶಕ ಪೇಮನಾಥ್, ನಿಲಯ ಮೇಲ್ವಿಚಾರಕ ರಾದ ಹಾಲೇಶ್, ಗುರುಸಿದ್ದಪ್ಪ, ರಾಮಾಂಜನೇಯ, ಹಸನ್‌ಪೀರ್, ಪ್ರೇಮ, ಸಿಬ್ಬಂದಿಗೆಳಾದ ವಿಶ್ವನಾಥ್, ಅಮಿತ್ ರೆಹಮಾನ್,ಇನ್ನು ಮುಂತಾದವರು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend