ಮೊಳಕಾಲ್ಮೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಧ್ಯಕ್ಷರಾದ ಈಶ್ವರ್ ಖಂಡ್ರೆ; ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.!

ಚಿತ್ರದುರ್ಗ: ಮೊಳಕಾಲ್ಮುರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾದ ಈಶ್ವರ್ ಖಂಡ್ರೆಯವರನ್ನು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಹಾನಗಲ್ ಕ್ರಾಸ್ ಬಳಿ ಆತ್ಮೀಯವಾಗಿ ಸ್ವಾಗತಿಸಿದರು. ಅನೈತಿಕವಾಗಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗಿ ಪಕ್ಷ ಸಂಘಟನೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ಈ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟೇಲ್ ಜಿ ಪಾಪನಾಯಕ, ಮೊಳಕಾಲ್ಮೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಎನ್.ಕೆ.ದಾದಪೀರ್, ಪಟ್ಟಣ ಪಂಚಾಯತಿ ಸದಸ್ಯರಾದ ಅಬ್ದುಲ್ಲಾ, ಪಟ್ಟಣ ಪಂಚಾಯತಿ ಸದಸ್ಯರುಗಳು, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಜುಬೇರ್ ಅಹಮದ್, ಮುಖಂಡರಾದ ಖಲೀಂವುಲ್ಲಾ, ನಜೀರ್, ಕರುನಾಡು ಜಿಯಾವುಲ್ಲಾ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಕೆ, ಜೆ.ಜಯಲಕ್ಷ್ಮಿ, ಎಸ್.ಸಿ.ಘಟಕದನಾಗರಾಜ ಕಟ್ಟೆ, ಖಾದರ್, ರಾಯಾಪುರ ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ, ಮುಖಂಡರಾದ ಶಿವಲಿಂಗ, ಓಬಣ್ಣ, ಖಲೀಂಉಲ್ಲಾ ಜಿಯಾವುಲ್ಲಾ ವಸೀವುಲ್ಲಾ, ಟಿ.ಎಸ್.ಪಾಲಯ್ಯ, ಪಾಪಣ್ಣ ಚಿಕ್ಕರಹಳ್ಳಿ ಸಿದ್ದೇಶ, ಯಜ್ಜನಹಳ್ಳಿ ನಾಗರಾಜ, ಎಲ್ಲಾ ಘಟಕಗಳ ಪದಾಧಿಕಾರಿಗಳು, ಮುಖಂಡರುಗಳು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend