ಮೊಳಕಾಲ್ಮೂರು: ಸಂಸದ ಎ.ನಾರಾಯಣಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ರಿಂದ ಸಂಭ್ರಮಾಚರಣೆ.!

ಚಿತ್ರದುರ್ಗ: ಮೊಳಕಾಲ್ಕುರು/ ಕೇಂದ್ರ ಮಂತ್ರಿ ಮಂಡಲದಲ್ಲಿ ಮಂತ್ರಿಯಾಗಿ ಜಿಲ್ಲೆಯ ಸಂಸದ ಎ.ನಾರಾಯಣಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿದರು. ಮೊಳಕಾಲ್ಮೂರು ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಇಂದು ಬಿಜೆಪಿ ಕಾರ್ಯಕರ್ತರು ಮೆರವಣಿಗೆ ಮೂಲಕ ಆಗಮಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಪ್ರಧಾನಿ ಮಂತ್ರಿ ಮೋದಿಯವರಿಗೆ ಮತ್ತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಪರವಾಗಿ ಜೈ, ಘೋಷಗಳನ್ನು ಕೂಗಿದರು. ಈ ಸಂದರ್ಭದಲ್ಲಿ
ಮಂಡಲ ಕಾರ್ಯದರ್ಶಿ ಪ್ರಭಾಕರ್, ನಗರ ಘಟಕದ ಅಧ್ಯಕ್ಷ ಕಿರಣ್ ಗಾಯಕ್‌ವಾಡ್, ಎಸ್.ಸಿ. ಮೋರ್ಚಾ ಅಧ್ಯಕ್ಷ ಸಿದ್ದಾರ್ಥ, ಮಹಿಳಾಮೋರ್ಚಾ ಅಧ್ಯಕ್ಷಸರ್ವಮಂಗಳ, ಪಟ್ಟಣ ಪಂಚಾಯಿತಿ ಸದಸ್ಯ ಮಂಜಣ್ಣ ಯುವ ಮುಖಂಡರಾದ ಭೀಮಣ್ಣಅರ್ಜುನ್, ಪ್ರವೀಣ್, ಹರೀಶ್‌ ಪಾಳೇಗಾರ್, ದಿಲೀಪ್, ಕುಮಾರಸ್ವಾಮಿ, ನಾಗರಾಜ, ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಲರಾಂ, ಬೈರಾಪುರ ಸಿದ್ದಣ್ಣ ಬಿಜೆಪಿ ಕಾರ್ಯಕರ್ತರು, ಮುಖಂಡರು, ಉಪಸ್ಥಿತರಿದ್ದರು..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend