ಮೊಳಕಾಲ್ಮೂರು: ರಾಂಪುರ ಮಂಡಲದ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ.!

ಚಿತ್ರದುರ್ಗ: ಮೊಳಕಾಲ್ಮೂರು ರಾಂಪುರ ಮಂಡಲದ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಂಪುಟದಲ್ಲಿ, ಕೇಂದ್ರ ಸಚಿವರಾಗಿ ಚಿತ್ರದುರ್ಗ ಸಂಸದ ಎ ನಾರಾಯಣ ಸ್ವಾಮಿಯವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ತಾಲೂಕಿನ ರಾಂಪುರದಲ್ಲಿ ರಾಂಪುರ ಮಹಾಶಕ್ತಿ ಕೇಂದ್ರ ದಲ್ಲಿ ಬಿಜೆಪಿ ಮಂಡಲ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ, ಸಂಭ್ರಮಾಚರಣೆ ಮಾಡಿದರು. ಇದೇ ವೇಳೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಜನಸ್ನೇಹಿಯಾದ ಸಂಸದ ಎ. ನಾರಾಯಣಸ್ವಾಮಿ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಬಿಜೆಪಿ ಪಕ್ಷಕ್ಕೆ ಹಾಗೂ ವರಿಷ್ಠರಿಗೆ ಜೈಕಾರ ಹಾಕುವ ಮೂಲಕ, ಕಾರ್ಯಕರ್ತರು ಸಂಭ್ರಮಿಸಿದರು. ಇದೇ ವೇಳೆ ಬಿಜೆಪಿ ರಾಂಪುರ ಮಂಡಲದ ಉಪಾಧ್ಯಕ್ಷರಾದ ನರೇಂದ್ರಬಾಬು, ಯುವ ಮೋರ್ಚಾ ಅಧ್ಯಕ್ಷರಾದ ಹರೀಶ್, ಎಸ್ಟಿ ಮೋರ್ಚಾ ಅಧ್ಯಕ್ಷ ಜೀರಳ್ಳಿ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಲ್. ಪರಮೇಶ್ವರಪ್ಪ, ತಮ್ಮೇನಹಳ್ಳಿ ಶಕ್ತಿಕೇಂದ್ರದ ಪ್ರಮುಖ್ ಹನುಮಂತ ಉಪ್ಪಾರ್, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend