ಮೊಳಕಾಲ್ಮೂರು ಪಟ್ಟಣದಲ್ಲಿ ಇತ್ತೀಚೆಗೆ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ.!

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ ಇತ್ತೀಚೆಗೆ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಇಂದು ಪಟ್ಟಣದ ಮುಬಾರಕ್ ಮೊಹಲ್ಲಾದ ವ್ಯಕ್ತಿಯ ತರಕಾರಿ ಖರೀದಿ ಮಾಡುತ್ತಿದ್ದ ವೇಳೆ, ಗಮನ ಬೇರೆಡೆ ಸೆಳೆದು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ನಿನ್ನೆಯೂ ಸಹ, ವಾರದ ಸಂತೆ ಯಾದ್ದರಿಂದ ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರನೊಬ್ಬರು ಸಂತೆಯಲ್ಲಿ ತರಕಾರಿ ಕೊಳ್ಳುತ್ತಿದ್ದ ಸಂದರ್ಭದಲ್ಲಿ, ಪ್ಲಾಸ್ಟಿಕ್ ಬ್ಯಾಗ್ ಅಡ್ಡ ಹಿಡಿದು ಗಮನ ಬೇರೆಡೆ ಸೆಳೆಯುವಂತೆ ಮಾಡಿ ಜೇಬಿನಲ್ಲಿದ್ದ ಮೊಬೈಲ್ ನ್ನು ಕ್ಷಣಾರ್ಧದಲ್ಲೇ ಎಗರಿಸಿ ಪರಾರಿಯಾಗಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೇರಿಯಾಗಿದೆ. ಇಂದೂ ಸಹ, ಮೊಬೈಲ್ ಕಳ್ಳತನ ಮಾಡಿದ್ದು, ಪೊಲೀಸರು ಇಂತಹ ಕೃತ್ಯ ಮಾಡುವವರ ಬಗ್ಗೆ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend