ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದಲ್ಲಿ ಇಂದು ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ಸ್ವೀಕರಿಸಿದ ಹಿನ್ನೆಲೆ ಯಲ್ಲಿ ಪಟ್ಟಣದಲ್ಲಿ ಬಿಜೆಪಿ ಕಾರ್ಯ ಕರ್ತರು ಪಠಾಕಿ ಸಂಭ್ರಮಾಚರಣೆ ನಡೆಸಿದರು. ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ ನೇತೃತ್ವದಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಸಾಗುತ್ತಾ ಬಸ್ ನಿಲ್ದಾಣ ಮತ್ತು ಕೆಇಬಿ ವೃತ್ತದಲ್ಲಿ ಪಠಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಹಾರೈಸಿದರು. ಮೊಳಕಾಲ್ಮುರು ಶಾಸಕರಾದ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಒಲಿಯುವ ನಿರೀಕ್ಷೆ ದಟ್ಟವಾಗಿರುವ ಹಿನ್ನಲೆಯಲ್ಲಿ ಮೊಳಕಾಲ್ಮುರು ಪಟ್ಟಣದಲ್ಲಿಂದು ಬಿಜೆಪಿ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಸಿದರು. ಪಟ್ಟಣದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಶ್ರೀರಾಮುಲು ಸೇನೆಯ ಅಭಿಮಾನಿ ಬಳಗದವರು ಕೆಇಬಿ ವೃತ್ತದಿಂದ ಬಸ್ ನಿಲ್ದಾಣದವರೆಗೂ ವಿಜಯೋತ್ಸವ ಆಚರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ.ಪಿ.ಎಂ ಮಂಜುನಾಥ್ ರವರು ಮಾತನಾಡಿ ಬದಲಾದ ಪರಿಸ್ಥಿತಿಯಲ್ಲಿ ಬಸವರಾಜ್ ಬೊಮ್ಮಾಯಿ ರವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು ಪಕ್ಷದ ಕಾರ್ಯಕರ್ತರಲ್ಲಿ ಸಂತಸ ತಂದಿದೆ. ಹಾಗೆಯೇ ಚುನಾವಣೆ ಪೂರ್ವದಲ್ಲಿ ಕ್ಷೇತ್ರದಲ್ಲಿ ಗೆದ್ದಿರುವ ಶ್ರೀರಾಮುಲು ರವರಿಗೆ ಬಿಜೆಪಿ ಪಕ್ಷವು ನೀಡಿದ ಭರವಸೆಯಂತೆ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲು ಎಲ್ಲ ಸಿದ್ಧತೆ ನಡೆದಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು ಉಪ ಮುಖ್ಯಮಂತ್ರಿಯಾದರೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಾಗಲಿವೆ ಬಿಜೆಪಿ ಪಕ್ಷವೂ ನುಡಿದಂತೆ ನಡೆದಿದೆ ಎಂದರು. ಇದೇ ವೇಳೆ ಶ್ರೀರಾಮುಲು ಸೇನೆಯ ರಾಜ್ಯಾಧ್ಯಕ್ಷ ಬಿ.ವಿಜಯ್ ಮಾತನಾಡಿ ನಾಯಕ ಸಮುದಾಯದ ಪ್ರಶ್ನಾತೀತ ನಾಯಕರಾಗಿರುವ ಶ್ರೀರಾಮುಲು ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ತುಂಬಾ ಖುಷಿ ತಂದಿದೆ.. ಚುನಾವಣೆಯಲ್ಲಿ ಬಿಜೆಪಿ ಪಕ್ಷವು ನೀಡಿದ ಭರವಸೆಯಂತೆ ಈಗ ನಮ್ಮ ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು ರವರು ಉಪಮುಖ್ಯಮಂತ್ರಿಯಾಗುತ್ತಿರುವುದು ಶ್ರೀರಾಮುಲು ಅಭಿಮಾನಿಗಳ ಬಳಗದಲ್ಲಿ ಮತ್ತು ಪಕ್ಷದಲ್ಲಿ ಅತೀವ ಸಂತಸ ತಂದಿದೆ ಮುಂದಿನ ದಿನಗಳಲ್ಲಿ ಕ್ಷೇತ್ರವೂ ಇನ್ನಷ್ಟು ಪ್ರಗತಿಪಥದತ್ತ ಸಾಗಲಿದೆ ಎಂದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ ಲಕ್ಷ್ಮಣ್, ಸದ್ಯಸರಾದ ತಿಪ್ಪೇಸ್ವಾಮಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಪ್ರಭಾಕರ್, ನಗರ ಘಟಕದ ಅಧ್ಯಕ್ಷರಾದ ಕಿರಣ ಗಾಯಕವಾಡ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಸಿದ್ಧಾರ್ಥ, ಬಿಜೆಪಿ ಯುವ ಮುಖಂಡ ಮಂಜುನಾಥ, ಅರ್ಜುನ್, ಭೀಮಣ್ಣ, ಬೋರಣ್ಣ, ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳು ಕಾರ್ಯಕರ್ತರು ಮೋರ್ಚಾ ಅಧ್ಯಕ್ಷರು ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು…
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
