;

ಬ್ರೇಕಿಂಗ್ ನ್ಯೂಸ್: ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ, ಯಾರಿಗೆಲ್ಲ ಒಲಿಯಿತು ಸಚಿವ ಸ್ಥಾನ?

ಬ್ರೇಕಿಂಗ್ ನ್ಯೂಸ್: ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ | ಯಾರಿಗೆಲ್ಲ ಒಲಿಯಿತು ಸಚಿವ ಸ್ಥಾನ?
ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ರಾಜಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಭೋದಿಸಿದರು.

ರಾಜ್ಯದಲ್ಲಿ ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಾರ್ಯಕ್ರಮದಲ್ಲಿ ಮಾಜಿ ಮುಖ್ಯುಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದು, ನೂತನ ಸಚಿವರಿಗೆ ಶುಭ ಹಾರೈಸಿದ್ದಾರೆ.

ಮೊದಲನೆಯದಾಗಿ ಹಿರಿಯ ಬಿಜೆಪಿ ನಾಯಕ ಗೋವಿಂದ ಕಾರಜೋಳ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಎರಡನೆಯದಾಗಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್.ಅಂಗಾರ, ಜೆ.ಸಿ.ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟ ಶ್ರೀನಿವಾಸ್ ಪೂಜಾರಿ, ಪ್ರಭು ಚೌಹಾಣ್, ಮುರುಗೇಶ್ ನಿರಾಣಿ, ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಭೈರತಿ ಬಸವರಾಜು, ಡಾ.ಕೆ.ಸುಧಾಕರ್, ಕೆ.ಗೋಪಾಲಯ್ಯ, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜ್, ಕೆ.ಸಿ.ನಾರಾಯಣ ಗೌಡ, ಬಿ.ಸಿ.ನಾಗೇಶ್, ವಿ.ಸುನೀಲ್ ಕುಮಾರ್, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಮುನಿರತ್ನ ಪ್ರಮಾಣ ವಚನ ಸ್ವೀಕರಿಸಿದರು…

ವರದಿ. ಮುಕ್ಕಣ್ಣ ಹುಲಿಗುಡ್ಡ, ಬೆಂಗಳೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;