;

ಬಿಗ್ ನ್ಯೂಸ್: ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್…!!!

ಬಿಗ್ ನ್ಯೂಸ್: ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್
ಮೈಸೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸಂಸದರಾಗಿರುವ ಶ್ರೀನಿವಾಸ್ ಪ್ರಸಾದ್ ಅವರ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದು, ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ನಾನು ತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷಗಳ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆಯ ಕಾರಣ ಸ್ಪರ್ಧೆ ಮಾಡಿದ್ದೆ. ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಮೈಸೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿರುವ ಹಿರಿಯ ದಲಿತ ನಾಯಕ ಶ್ರೀನಿವಾಸ್ ಪ್ರಸಾದ್ ಅವರು ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು..

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;