ಬೆಸ್ಕಾಂ ಇಲಾಖೆಯನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಪ್ರತಿಭಟನೆ…!!!

ಕೇಂದ್ರ ಸರ್ಕಾರ ರೈತರ ಕೃಷಿ ಪಂಪುಸೆಟ್ಟುಗಳಿಗೆ ವಿದ್ಯುತ್‌ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಬೆಸ್ಕಾಂ ಇಲಾಖೆ ಯಾನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಪ್ರತಿಭಟನೆ. ಹಾಗೆಯೇ
2020ನೇ ಸಾಲಿನ ಬೆಳೆವಿಮೆ ಪಾವತಿ ಮಾಡಿದ ರೈತರಿಗೆ ಬೆಳೆವಿಮೆಯನ್ನು ಮತ್ತು ನಷ್ಟ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ವರ್ಗಹಿಸುವಂತೆ ಒತ್ತಾಯ ಮಾಡಿದರು.
ಕೇಂದ್ರ ಸರ್ಕಾರ ಬಡವರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ರೈತರ ಕೃಷಿ ಪಂಪುಸೆಟ್ಟುಗಳಿಗೆ ವಿದ್ಯುತ್‌ ಅನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸುವುದು ಹಾಗೂ 2020ನೇ ಸಾಲಿನ ಬೆಳೆವಿಮೆ ಪಾವತಿ ಮಾಡಿದ ರೈತರಿಗೆ ಬೆಳೆವಿಮೆಯನ್ನು ಮತ್ತು ನಷ್ಟ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಒತ್ತಾಯಿಸಿ, ಕರ್ನಾಟಕ ರೈತ ಸಂಘ ಚಳ್ಳಕೆರೆ ವತಿಯಿಂದ ಕೆ ಪಿ ಭೂತಯ್ಯ ಅವರ ನೇತೃತ್ವದಲ್ಲಿ ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟ ರಘುಮೂರ್ತಿ ಅವರು ಪಾಲ್ಗೊಂಡು, ರೈತರ ವಿರೋಧಿ ಕಾನೂನು ಹಾಗೂ ಕಾಯ್ದೆಗಳನ್ನು ಶೀಘ್ರವಾಗಿ ಹಿಮ್ಮಪಡೆಯುವಂತೆ ಪ್ರತಿಭಟನೆ ನಡೆಸಲಾಯಿತು.
ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಈ ಹೋರಾಟದಲ್ಲಿ ನೂರಾರು ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳು ಪಾಲ್ಗೊಂಡು, ರೈತ ಹೋರಾಟಕ್ಕೆ ಬೆಂಬಲ ವ್ಯಕ್ತ ಪಡಿಸಿದರು…

ವರದಿ.ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend