ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ…!!!

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ | ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ

ಬೆಂಗಳೂರು: ಕೊರೊನಾ ಪಾಸಿಟಿವಿಟಿ ದರ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ದಕ್ಷಿಣ ಕನ್ನಡ ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕೊವಿಡ್ ನಿರ್ವಹಣೆ ಸಂಬಂಧ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಸದ್ಯ ಇರುವ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರಲಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಮಹಾರಾಷ್ಟ್ರ ಹಾಗೂ ಕೇರಳ ಗಡಿ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend