ಸಿಂಧನೂರು : ನೂತನ ಉಸ್ತುವಾರಿ ಸಚಿವರಿಗೆ ಸನ್ಮಾನ.
ಇಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಪ್ರಪ್ರಥಮವಾಗಿ ಭಾರತೀಯ ಜನತಾ ಪಾರ್ಟಿ ರಾಯಚೂರು ಜಿಲ್ಲಾ ಕಾರ್ಯಾಲಯಕ್ಕೆ ಆಗಮಿಸಿದ ಸನ್ಮಾನ್ಯ ಶ್ರೀ ವಿ. ಸೋಮಣ್ಣನವರನ್ನು ಬಿಜೆಪಿ ಮುಖಂಡರಾದ ಕೊಲ್ಲಾ ಶೇಷಗಿರಿರಾವ್ ಅವರು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಸಿಂಧನೂರು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಟಿ. ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿಮಠ ಬಿಜೆಪಿಯ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು…

ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
