;

ಸಿಂಧನೂರು :” ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ “ಆರ್ ದೃವನಾರಾಯಣ…!!!

ಸಿಂಧನೂರು :” ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ “ಆರ್ ದೃವನಾರಾಯಣ.

ನಗರದ ಕೋಟೆ ಈರಣ್ಣ ದೇವಸ್ಥಾನದಲ್ಲಿ ಚಲವಾದಿ ಮತ್ತು ಮಾದಿಗ ಸಮುದಾಯದಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಆರ್ ಧ್ರುವ ನಾರಾಯಣ್ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು “ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂದು ಹೇಳಿದರು. ಸ್ವತಂತ್ರ ಪೂರ್ವದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕ ಮತದಾನದ ಹಕ್ಕನ್ನು ಕೊಡಬೇಕೆಂದು ಒತ್ತಾಯ ಮಾಡಿದರು. ಆದರೆ ಗಾಂಧೀಜಿ ಅವರು ಉಪವಾಸ ಸತ್ಯಾಗ್ರಹ ಮಾಡಿದ ನಂತರ ಅದನ್ನು ಕೈಬಿಡಲಾಯಿತು. ಪೂನಾ ಒಪ್ಪಂದದ ಪ್ರಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಕೊಡಬೇಕೆಂದು ಒಪ್ಪಂದವಾಯಿತು.

ಕಳೆದ ಮಸ್ಕಿ ವಿಧಾನಸಭೆ ಚುನಾವಣೆಯಲ್ಲಿ ಎರಡು ಸಮುದಾಯದ ಎಲ್ಲಾ ಮುಖಂಡರು ಕಾರ್ಯಕರ್ತರು ಹಗಲು ರಾತ್ರಿ ಕೆಲಸ ಮಾಡಿ ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಬಹುಮತದಿಂದ ಗೆಲ್ಲಿಸಿದ್ದಕ್ಕಾಗಿ ನಾನು ನಿಮಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರವಾಗಿದೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

ಹಂಪನಗೌಡ ಬಾದರ್ಲಿ ಮಾತನಾಡಿ ಸಿದ್ದರಾಮಯ್ಯ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ವರ್ಷಕ್ಕೆ 30 ಸಾವಿರ ಕೋಟಿ ಅನುದಾನವನ್ನು ಕೊಟ್ಟಿದೆ ಆದರೆ ಸಮಾಜದ ಮುಖಂಡರು ಸದ್ಬಳಕೆ ಮಾಡಿಕೊಳ್ಳಲಿಲ್ಲ. ಬಡತನದಲ್ಲಿರುವ ವ್ಯಕ್ತಿಯನ್ನು ಗುರುತಿಸಿ ಸರಕಾರದ ಸೌಲಭ್ಯಗಳನ್ನು ಕೊಡಿಸಲು ಪ್ರಯತ್ನ ಮಾಡಬೇಕು ಎಂದು ಎರಡು ಸಮೂದಾಯದ ಮುಖಂಡರಿಗೆ ಸಲಹೆ ನೀಡಿದರು. ಈ ಈ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ಅಧ್ಯಕ್ಷರಾದ ಬಿ. ವಿ.ನಾಯಕ್, ಶರಣಪ್ಪ ಮಟ್ಟೂರು, ಬಸನಗೌಡ ತುರುವಿಹಾಳ ಮಸ್ಕಿ ಶಾಸಕರು, ಮಲ್ಲಿಕಾರ್ಜುನ ಪಾಟೀಲ್, ಪಾಮಯ್ಯ ಮುರಾರಿ, ಯಮನಪ್ಪ ಮಲ್ಲಾಪುರ್, ರಾಜು ನಾಯಕ್, ಹನುಮಂತಪ್ಪ ಮುದ್ದಾಪುರ್, ಶೇಖರಪ್ಪ ಗಿಣಿವಾರ, ಈರಣ್ಣ, ರಾಮಣ್ಣ ಗೋನ್ವಾರ್ ಚಲವಾದಿ ಮಹಾಸಭಾ ಅಧ್ಯಕ್ಷರು, ನಿಂಗಪ್ಪ ದಡೇಸೂಗೂರ್ ರಾಮಣ್ಣ ಸಾಸಲಮರಿ ತಾಲೂಕು ಪಂಚಾಯತ್ ಸದಸ್ಯರು, ಇನ್ನೂ ಅನೇಕ ಚಲವಾದಿ ಮಾದಿಗ ಸಮುದಾಯದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;