;

ತಾಯಕನಹಳ್ಳಿ: ಸ್ವಾಮಿ ವಿವೇಕಾನಂದ ರಕ್ತ ಭಂಡಾರ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ ಶ್ರೀ ಗುರು ಕನಕ ವಿದ್ಯಾಕೇಂದ್ರ ಆವರಣದಲ್ಲಿ (ಅಗಸ್ಟ್-15) ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹೂಡೇಂ ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೇಂದ್ರ ತಾಯಕನಹಳ್ಳಿ ಸಿಂಚನ ಶಿಕ್ಷಣ ಮತ್ತು ಗ್ರಾಮೀಣ ಮಕ್ಕಳ ಆರೋಗ್ಯ, ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ರಕ್ತದಾನ ಬಂಡಾರ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಿರೂಪಣೆ ಮತ್ತು ಸ್ವಾಗತ ಮಂಜಣ್ಣ ಬಿ.ಟಿ ಶ್ರೀಕನಕ ವಿದ್ಯಾಕೇಂದ್ರ ತಾಯಕನಹಳ್ಳಿ, ಶ್ರೀ ಗೋಪಾಲರೆಡ್ಡಿ ಸ್ವಾಮಿ ವಿವೇಕಾನಂದ ರಕ್ತ ಬಂಡಾರ ಬಳ್ಳಾರಿ.

ಶ್ರೀ ಸಿದ್ದೇಶ್ವರ ಆಪ್ತ ಸಾಯಕರು ಆರೋಗ್ಯ ಇಲಾಖೆ ಅವರು ಮಾತನಾಡಿದರು, ಎಲ್ಲ ದಾನಗಳಲ್ಲೇ ರಕ್ತದಾನ ಶ್ರೇಷ್ಠ ದಾನ. ರಕ್ತವನ್ನು ದಾನ ಮಾಡುವುದು ಒಳ್ಳೆಯ ಕಾರ್ಯ. ರಕ್ತದಾನ ಮತ್ತೊಬ್ಬರ ಪ್ರಾಣ ಉಳಿಸುವ ಜತೆಗೆ ವ್ಯಕ್ತಿ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ’ ರಕ್ತಕ್ಕೆ ಪರ್ಯಾಯ ಇಲ್ಲ. ಆದ್ದರಿಂದ ಸಾವಿನ ಅಂಚಿನಲ್ಲಿರುವವರ ಜೀವ ಉಳಿಸಬೇಕಾದರೆ ರಕ್ತವೇ ನೀಡಬೇಕು. ಆದ್ದರಿಂದ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾ ಡೇಡಲು ಮುಂದೆ ಬರಬೇಕು. 18 ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೂಡೇಂ ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಪಾಪನಾಯಕ್ ಅವರು, ಹಾಗೂ ಪಿಡಿಒ ಮಾರೇಶ್, ಹೂಡೇಂ ಗ್ರಾ.ಪಂ ಅಧ್ಯಕ್ಷರಾದ ಕರಿಬಸಮ್ಮ-ದುರ್ಗಪ್ಪ, ಉಪಾಧ್ಯಕ್ಷರು ರಾಘವೇಂದ್ರ ಕೆ.ಎನ್, ಹೂಡೇಂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ” ಶಿವಣ್ಣ ಹಾಗೂ ಡಾ” ಧರ್ಮ ನಾಯಕ್, ಗ್ರಾ.ಪಂ ಸದಸ್ಯರಾದ ಅಜ್ಜಣ್ಣ, ಗದ್ದಿಗೇಶ್, ಮಂಜುನಾಥ, ಗಿರೀಶ್, ಕೆಂಚ ಲಿಂಗಪ್ಪ, ಕುಬೇರ, ಸುನಿತಾ ಗುರುರಾಜ್, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಸೇರಿದಂತೆ ಹಲವರು ಉಪಸ್ಥಿತರಿದ್ದರು…

ವರದಿ. ಬಸಣ್ಣಿ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;