;

ಸವರ್ಣೀಯರಿಂದ ಶೋಷಿತರಿಗೆ ಇನ್ನೂ ಸ್ವಾತಂತ್ರ್ಯ ದೊರೆತಿಲ್ಲ | ಅಂಬೇಡ್ಕರ್ ಸೇನೆ…!!!

ಸವರ್ಣೀಯರಿಂದ ಶೋಷಿತರಿಗೆ ಇನ್ನೂ ಸ್ವಾತಂತ್ರ್ಯ ದೊರೆತಿಲ್ಲ | ಅಂಬೇಡ್ಕರ್ ಸೇನೆ

ಕೆ.ಆರ್.ಪುರಂ: ಬ್ರಿಟಿಷರಿಂದ ಭಾರತೀಯರಿಗೆ ಸ್ವಾತಂತ್ರ್ಯ ದೊರೆತು 75 ವರ್ಷಗಳೇ ಕಳೆದರೂ ಭಾರತೀಯ ಶೋಷಿತ ಸಮುದಾಯಗಳಿಗೆ ಸವರ್ಣೀಯರಿಂದ ಸ್ವಾತಂತ್ರ್ಯ ದೊರೆತಿಲ್ಲ ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ರಾಜ್ಯ ಸಂಚಾಲಕ ದೊಡ್ಡಗುಬ್ಬಿ ಸತೀಶ್ ಹೇಳಿದರು.

 

ಕೆ.ಆರ್.ಪುರದಲ್ಲಿ ಮೂಲನಿವಾಸಿ ಅಂಬೇಡ್ಕರ್ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಸಮಿತಿ ರಚನಾ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶಾದ್ಯಂತ ದಲಿತ, ಹಿಂದುಳಿದ ವರ್ಗಗಳ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಇಂದಿಗೂ ದಬ್ಬಾಳಿಕೆ ಮತ್ತು ದೌರ್ಜನ್ಯಗಳು ನಡೆಯುತ್ತಲೇ ಇರುವುದು ಖಂಡನೀಯ. ಈ ಬಗ್ಗೆ ಆಳುವ ಸರ್ಕಾರಗಳಿಂದ ಯಾವುದೇ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸಂಘಟನಾ ಸಂಚಾಲಕ ರಾಹುಲ್ ಹುಲಿಮನಿ ಮಾತನಾಡಿ, ಸ್ವಾತಂತ್ರ್ಯ, ಸಮಾನತೆ ಬಯಸುವ ಯಾರೇ ಆಗಲಿ ಬಾಬಾಸಾಹೇಬ್ ಅಂಬೇಡ್ಕರರು ತೋರಿದ ಮಾರ್ಗಗಳನ್ನು ಅನುಸರಿಸಿದರೆ ಮಾತ್ರ ದೇಶದಲ್ಲಿರುವ ಅನಿಷ್ಠ ಪದ್ಧತಿಗಳನ್ನು ಬೇರು ಸಮೇತ ಕಿತ್ತುಗೆದು ನಿಜವಾದ ಸ್ವಾತಂತ್ರ್ಯ ಪಡೆದುಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ರಾಜ್ಯ ಪ್ರಧಾನ ಸಂಚಾಲಕ ಧನರಾಜ್ ನಾಗವಂಶಿ ಮಾತನಾಡಿ, ದೇಶದ ಶೇ.85ರಷ್ಟು ಜನಸಂಖ್ಯೆ ಹೊಂದಿರುವ ಮೂಲನಿವಾಸಿ ಸಮುದಾಯಗಳು ಎಲ್ಲಿಯವರೆಗೂ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಒಂದಾಗುವುದಿಲ್ಲವೋ ಅಲ್ಲಿಯವರೆಗೂ ಆಳುವ ವರ್ಗಗಳು ಶೋಷಿತ ಸಮುದಾಯಗಳ ಮೇಲೆ ದಬ್ಬಾಳಿಕೆಗಳು ನಡೆಸುತ್ತಲೇ ಇರುತ್ತವೆ ಎಂದು ಹೇಳಿದರು…

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;