;

ಫುಡ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ: ಇಬ್ಬರು ಕಾರ್ಮಿಕರು ಸಜೀವ ದಹನ…!!!

ಫುಡ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ: ಇಬ್ಬರು ಕಾರ್ಮಿಕರು ಸಜೀವ ದಹನ

ಬೆಂಗಳೂರು: : ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ಸ್ಪೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿರುವ ಗೋಪಾಲಪುರ ಬಳಿ ನಡೆದಿದ್ದು, ಮೃತಪಟ್ಟವರು ಬಿಹಾರ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ.

ಸೌರಭ್ ಹಾಗೂ ಮನೀಶ್ ಮೃತ ಕಾರ್ಮಿಕರಾಗಿದ್ದು, ಘಟನೆಯಲ್ಲಿ ಮನೀಷ್ ಸೇರಿ ನಾಲ್ವರು ಗಾಯಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಮಧ್ಯಾಹ್ನ 1.45ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ.

ಆಹಾರ ತಯಾರಿಸುವ ಬಾಯ್ಲರ್ ಹೆಚ್ಚು ಹೀಟ್ ಆಗಿ ಸ್ಫೋಟಗೊಂಡ ಪರಿಣಾಮ ಸಿಲಿಂಡರ್ ಕೂಡಸ್ಫೋಟವಾಗಿದೆ‌. ಘಟನೆಯಲ್ಲಿ‌ ಮನೀಶ್ ಹಾಗೂ ಸೌರಭ್ ಎಂಬುವವರು ಮೃತಪಟ್ಟಿದ್ದಾರೆ ಎಂದು ಘಟನಾ ಸ್ಥಳಕ್ಕೆ ಆಗಮಿಸಿದ ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ…

ವರದಿ. ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;