;

ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಅಹ್ವಾನ…!!!

ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಅಹ್ವಾನ

ಚಿತ್ರದುರ್ಗ, sಆಗಸ್ಟ್24:
2021-22ನೇ ಸಾಲಿಗೆ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆ ದಿನ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ  ಮುಖ್ಯ ಕ್ರಿಯಾಯೋಜನೆಯಡಿ ಪ್ರಸಕ್ತ ಸಾಲಿಗೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಜಿಲ್ಲೆಗೆ ಒಟ್ಟು ಭೌತಿಕ 34 ಹಾಗೂ ಪ.ಜಾತಿ ಮತ್ತು ಪ.ಪಂಗಡ ಉಪಯೋಜನೆಯಡಿ ಬಳಕೆಯಾಗದ ಅನುದಾನದಡಿ ಪ.ಜಾತಿ-10 ಹಾಗೂ ಪ.ಪಂಗಡ-09 ಒಟ್ಟು 53 ಗುರಿ ನಿಗದಿಪಡಿಸಲಾಗಿದೆ.
ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕೆ ಚಟುವಟಿಕೆಗಳನ್ನು ಕೈಗೊಂಡು ಮಹಿಳೆಯರು ಸ್ವ-ಉದ್ಯೋಗಿಗಳಾಗಲು ಬ್ಯಾಂಕ್‍ಗಳಿಂದ ಕನಿಷ್ಟ 1.00 ಲಕ್ಷದಿಂದ ಗರಿಷ್ಟ 3.00 ಲಕ್ಷ ಸಾಲ ಹಾಗೂ ನಿಗಮದಿಂದ ಸಹಾಯಧನ ಪಡೆಯಬಹುದಾಗಿರುತ್ತದೆ. ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ನಿಬಂಧನೆಗಳು: 18 ರಿಂದ 55 ವರ್ಷದ ಒಳಗೆ ಇರುವ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿದಾರರ ಕುಟುಂಬದ ಆದಾಯ ರೂ.2,00.000/-ಗಳಿಗೆ ಮೀರಿರಬಾರದು. ಇತರೆ ವರ್ಗದ ಅರ್ಜಿದಾರರ ಕುಟುಂಬದ ಆದಾಯ ರೂ.1,50.000/-ಗಳಿಗೆ ಮೀರಿರಬಾರದು. ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಚಿಸುವವರು ಈ ಹಿಂದೆ ಬೇರೆ ಇಲಾಖೆಗಳಲ್ಲಿ ಯಾವುದೇ ಯೋಜನೆಗಳಡಿ ಸಾಲ ಸೌಲಭ್ಯ ಪಡೆದಿರಬಾರದು.  ಇಡಿಪಿ ತರಬೇತಿ ಕಡ್ಡಾಯವಾಗಿದ್ದು ಸಾಲ ಮಂಜೂರಾದ ಫಲಾನುಭವಿಗಳಿಗೆ ಇಡಿಪಿ ತರಬೇತಿ ಪಡೆದ ನಂತರವೇ ಸಹಾಯಧನ ಬಿಡುಗಡೆ ಮಾಡಲಾಗುವುದು.
ಮೇಲಿನ ನಿಬಂಧನೆಗಳಿಗೆ ಒಳಪಟ್ಟು ಅರ್ಜಿ ಸಲ್ಲಿಸುವವರು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಗಳು ಲಭ್ಯವಿದೆ. ಅರ್ಜಿ ಭರ್ತಿ ಮಾಡಿ, ಅರ್ಹ ದಾಖಲೆಗಳೊಂದಿಗೆ ಸೆಪ್ಟೆಂಬರ್ 13ರ ಸಂಜೆ 5.30 ರೊಳಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ಇಲ್ಲಿ ಕಚೇರಿಯ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;