;

ಭಾರತವು ಕಂಪೆನಿಗಳ ಗುಲಾಮಗಿರಿಯತ್ತ ಸಾಗುತ್ತಿದೆ | ಈಸ್ಟ್ ಇಂಡಿಯಾ ಕಂಪೆನಿಯನ್ನು ನೆನಪಿಸಿದ ರಾಹುಲ್ ಗಾಂಧಿ!!!!?

ಭಾರತವು ಕಂಪೆನಿಗಳ ಗುಲಾಮಗಿರಿಯತ್ತ ಸಾಗುತ್ತಿದೆ | ಈಸ್ಟ್ ಇಂಡಿಯಾ ಕಂಪೆನಿಯನ್ನು ನೆನಪಿಸಿದ ರಾಹುಲ್ ಗಾಂಧಿ!!!!?

ನವದೆಹಲಿ: 70 ವರ್ಷಗಳಲ್ಲಿ ನಿರ್ಮಿಸಿದ್ದ ಭಾರತದ ಕಿರೀಟಗಳನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದು, ಭಾರತದ ಸರ್ಕಾರಿ ಸಂಸ್ಥೆಗಳನ್ನು ಅಂಬಾನಿ ಸಹೋದರರಿಗೆ ಮಾರಾಟ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ 70 ವರ್ಷಗಳಲ್ಲಿ ಭಾರತದಲ್ಲಿ ಏನೂ ಅಭಿವೃದ್ಧಿ ಆಗಿಲ್ಲ ಎನ್ನುತ್ತಿರುವ ಬಿಜೆಪಿ, ಈಗ ಆ ಸಮಯದಲ್ಲಿ ಸಾರ್ವಜನಿಕ ಹಣದಿಂದ ಸೃಷ್ಟಿಯಾಗಿದ್ದ ಎಲ್ಲ ಆಸ್ತಿಗಳನ್ನು ಮಾರಾಟ ಮಾಡಲು ಹೊರಟಿದೆ ಎಂದು ಟೀಕಿಸಿದರು.

ಪ್ರಮುಖ ಕ್ಷೇತ್ರಗಳಲ್ಲಿ ಏಕಸ್ವಾಮ್ಯವನ್ನು ಸೃಷ್ಟಿಸುವುದು ಕೇಂದ್ರ ಸರ್ಕಾರದ ಖಾಸಗೀಕರಣದ ಯೋಜನೆಯ ಗುರಿಯಾಗಿದ್ದು, ಇದರಿಂದ ಉದ್ಯೋಗಗಳಿಗೆ ಕತ್ತರಿ ಬೀಳುತ್ತವೆ. ಅನೌಪಚಾರಿಕ ವಲಯವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುತ್ತದೆ. ಸಣ್ಣ ಉದ್ಯಮಗಳನ್ನು ನಾಶಪಡಿಸುತ್ತದೆ. ಇದು ಜನರು ಗುಲಾಮಗಿರಿ ಮಾಡುವಂತಹ ಸನ್ನಿವೇಶವನ್ನು ಸೃಷ್ಟಿಸುತ್ತದೆ ಎಂದು ರಾಹುಲ್ ಗಾಂಧಿ ಎಚ್ಚರಿಸಿದರು.

ಈ ಮೊದಲು ನಾವು ಈಸ್ಟ್ ಇಂಡಿಯಾ ಕಂಪೆನಿಯನ್ನು ಕಂಡಿದ್ದೇವೆ. ಈ ಕಂಪೆನಿಯು ದೇಶದ ಜನರನ್ನು ಗುಲಾಮರನ್ನು ಮಾಡಿತು. ಇದೀಗ ಮತ್ತೆ ಅದೇ ಸ್ಥಿತಿ ದೇಶದಲ್ಲಿ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ನಾವು ಗುಲಾಮಗಿರಿಯತ್ತ ಸಾಗುತ್ತಿದ್ದೇವೆ ಎಂದು ಎಚ್ಚರಿಸಿದರು..

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;