ಈ ಬಾರಿ ಆನ್ ಲೈನ್ ನಲ್ಲೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ: ಸಚಿವ ಬಿ.ಶ್ರೀರಾಮುಲು
ಬೆಂಗಳೂರು: ಕೊವಿಡ್ ನಡುವೆಯೇ ಶಾಲಾ ಕಾಲೇಜು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೂರದ ಊರುಗಳಿಂದ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಬಸ್ ಪಾಸ್ ಗಾಗಿ ಈ ಬಾರಿ ಕಚೇರಿಗೆ ಅಲೆಯ ಬೇಕಾಗಿಲ್ಲ. ಇಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇಂದಿನಿಂದಲೇ ಬಸ್ ಪಾಸ್ ಗಳನ್ನು ಆನ್ ಲೈನ್ ಮೂಲಕ ವಿತರಿಸಲಾಗುವುದು. ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿದೆ. ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಆನ್ ಲೈನ್ ನಲ್ಲಿಯೇ ಬಸ್ ಪಾಸ್ ನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು. ಜೊತೆಗೆ ಬಸ್ ಪಾಸ್ ದರದಲ್ಲಿ ಏರಿಕೆ ಮಾಡಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು…

ವರದಿ. ಎಂ. ಎಲ್. ವೆಂಕಟೇಶ್ ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
