;

ಮೊಳಕಾಲ್ಮುರು ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ.!

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಅಗಸ್ಟ್-29 ಇಂದು ತಾಲೂಕು ಆಡಳಿತ ವತಿಯಿಂದ ಶ್ರೀ ಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗುಂಡ್ಲೂರು ಕರಿಯಣ್ಣ ತಾಲೂಕು ಯಾದವ ಸಂಘದ ಅಧ್ಯಕ್ಷರು ಮಾತನಾಡಿ ಶ್ರಾವಣ ಮಾಸದಲ್ಲಿ ಬರುವ ಶ್ರೀ ಕೃಷ್ಣ ಪಕ್ಷದ ಅಷ್ಟಮೀ ಶ್ರೀ ಕೃಷ್ಣನು ಹುಟ್ಟಿದ ದಿನವಾಗಿದೆ. ಅಷ್ಟಮಿಯ ಮಧ್ಯರಾತ್ರಿ ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತು ಎಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮ ಸ್ಥಳವಾಗಿದ್ದು ಶ್ರೀಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದ ರಾಜನ ಮನೆಯಲ್ಲಿ ಕೃಷ್ಣನನ್ನು ಬಿಟ್ಟು ಬರುತ್ತಾನೆ ದೇವಕಿ ಶ್ರೀಕೃಷ್ಣನಿಗೆ ಜನ್ಮನೀಡಿದ ತಾಯಿಯಾದರೆ ಯಶೋಧೆ ಅವನನ್ನು ಸಾಕಿ ಬೆಳೆಸಿದ ತಾಯಿ ಎಂದು ಶ್ರೀ ಕೃಷ್ಣನ ಜನ್ಮ ರಹಸ್ಯ ಹಿನ್ನೆಲೆಯನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಸುರೇಶ್ ಕುಮಾರ್, ಯಾದವ ಮುಖಂಡರಾದ ಮರ್ಲಹಳ್ಳಿ ರವಿಕುಮಾರ್, ವೆಂಕಟೇಶ, ಸೇರಿದಂತೆ ಸಮುದಾಯದ ವಿವಿಧ ಮುಖಂಡರು ಪಾಲ್ಗೊಂಡಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;