;

ಮೊಳಕಾಲ್ಮೂರು ಪಟಣ್ಣದ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಲಾಯಿತು.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟಣ್ಣದ ಪೊಲೀಸ್ ಠಾಣೆಯ ಆವರಣದಲ್ಲಿ ಇಂದು ಗಣೇಶ ಹಬ್ಬದ ಪ್ರಯುಕ್ತ ತಾಲೂಕಿನ ಗಣೇಶ ಕಮಿಟಿ ದಾರರನ್ನು ಕರಿಸಿ ‘ಶಾಂತಿ ಸಭೆ ನಡೆಸಲಾಯಿತು. ಪಟ್ಟಣದ ಪ್ರತಿ ವಾರ್ಡ್‌ಗೆ ಒಂದು ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ಗ್ರಾಮಕ್ಕೆ ಒಂದು ಕಡೆ ಗಣೇಶ ಪ್ರತಿಷ್ಟಾಪನೆ ಮಾಡಲು ಅವಕಾಶವಿದ್ದು, ಪ್ರತಿಷ್ಟಾಪನಾ ಸ್ಥಳದ ಬಗ್ಗೆ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಪಿಡಿಒಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದರು. ಬೆಸ್ಕಾಂ, ಅಗ್ನಿಶಾಮಕ, ಪೊಲೀಸ್ ಇಲಾಖೆಗಳಿಂದ ನಿಬಂಧನೆಗಳಿಗೆ ಒಳಪಟ್ಟ ಅನುಮತಿ ಪಡೆಯಬೇಕು, ಗಣೇಶಮೂರ್ತಿ ಪ್ರತಿಷ್ಟಾಪನೆ ಹಾಗೂ ವಿಸರ್ಜನೆಯನ್ನು ಸಂದರ್ಭದಲ್ಲಿ ಮೆರವಣಿಗೆ, ಪಟಾಕಿ, ಸೋಟಕ ವಸ್ತುಗಳ ಬಳಕೆ ನಿಷೇಧಿಸಲಾಗಿದೆ. ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಸಬ್ ಇನ್ಸ್ಪೆಕ್ಟರ್ ಬಸವರಾಜ್ ತಿಳಿಸಿದರು. ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಜಿ.ಬಿ ಉಮೇಶ್ ನಾಯಕ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ ಲಕ್ಷ್ಮಣ್, ಕೆಎಸ್ ಗೋಪಾಲಕೃಷ್ಣ, ವೈ ಬಿ ಕುಮಾರಸ್ವಾಮಿ, ಬಿ ವಿಜಯ್, ತಿಪ್ಪೇಸ್ವಾಮಿ ಕೆ, ರಾಘವೇಂದ್ರ ಕೆ ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು….

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;