;

ಸಿಂಧನೂರು : ಬಿಜೆಪಿ ಆಡಳಿತ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ…!!!

ಸಿಂಧನೂರು : ಬಿಜೆಪಿ ಆಡಳಿತ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ.

ದೇಶದಲ್ಲಿ ಮಹಿಳೆಯರ ಮೇಲೆ ನಿತ್ಯ ದೌರ್ಜನ್ಯ ಅತ್ಯಾಚಾರ ಕೊಲೆ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ, ಇಂತಹ ಪೈಶಾಚಿಕ ಕೃತ್ಯವನ್ನು ತಡೆದು ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಸರ್ಕಾರದ ಈ ನಿರ್ಲಕ್ಷವನ್ನು ಸಿಂಧನೂರಿನ ಪ್ರಗತಿಪರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮತ್ತು ಮಹಿಳೆಯರ ಮೇಲಿನ ಅಮಾನವೀಯ ಕೃತ್ಯವನ್ನು ಸಮಸ್ತ ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಸರಸ್ವತಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯರ ಮೇಲಿನ ದೌರ್ಜನ್ಯ ಅತ್ಯಾಚಾರ ಕೊಲೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಮಹಿಳೆಯರು ನಗರದ ಪ್ರವಾಸಿ ಮಂದಿರದಿಂದ ತಹಸಿಲ್ ಕಾರ್ಯಲಯದವರಿಗೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ದೆಹಲಿಯಲ್ಲಿ ರಾಬಿಯಾ ಸೈಪಿಯವರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಕೊಲೆ ಘಟನೆಯನ್ನು ನ್ಯಾಯಾಂಗ ತನಿಖೆಗೊಳಪಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮೈಸೂರಿನ ವಿದ್ಯಾರ್ಥಿ ಮೇಲಿನ ಅತ್ಯಾಚಾರ ಮತ್ತು ಮುಂಬೈನಲ್ಲಿ ಗೃಹಣಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಮಾಧ್ಯಮಗಳಲ್ಲಿ ಲೈಂಗಿಕ ಅಶ್ಲೀಲ ವಿಡಿಯೋ ಚಿತ್ರಗಳ ಪ್ರಸಾರವನ್ನು ನಿಷೇಧಿಸಬೇಕು ಎಂಬ ಅನೇಕ ಹಕ್ಕೊತ್ತಾಯಗಳನ್ನು ತಹಸಿಲ್ದಾರ್ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಚಂದ್ರಶೇಖರ್ ಗೋರೆಬಾಳ ಡಿಎಚ್ ಕಂಬಳಿ ಹುಸೇನ್ ಸಾಬ್ ನಾಗರಾಜ್ ಪೂಜಾರ್ ಆರೋಗ್ಯ ಮ್ಮ ನಾರಾಯಣ ಬೆಳಗುರ್ಕಿ ವೀರಭದ್ರಗೌಡ ಮೈಬೂಬ್ ಖಾನ್ ಇನ್ನೂ ಅನೇಕ ಪ್ರಗತಿಪರ ಮುಖಂಡರು ಜಮಾತೆ ಸಂಘಟನೆಯ ಮುಖಂಡರು ಮಹಿಳೆಯರು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;