;

ಮೊಳಕಾಲ್ಮುರು: ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ದೇಶದ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆಯನ್ನು ಮೊಳಕಾಲ್ಮುರು ಪಟ್ಟಣದಲ್ಲಿ ವಿವಿಧ ಸಾಮಾಜಿಕ ಸೇವೆಗಳ ಮುಖಾಂತರ ಸರಳವಾಗಿ ಆಚರಿಸಲಾಯಿತು. ಮೋದಿಜಿ ಹುಟ್ಟು ಹಬ್ಬದ ಪ್ರಯುಕ್ತವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿಜೆಪಿ ಮಂಡಲದ ವತಿಯಿಂದ ರೋಗಿಗಳಿಗೆ ಹಣ್ಣು ಬ್ರೆಡ್ ವಿತರಣೆ ಮಾಡಲಾಯಿತು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ. ಮಂಜುನಾಥ್ ಮಾತನಾಡಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ತಾಲೂಕಿನ ಪ್ರಾಥಮಿಕ ಅರೋಗ್ಯ ಕೇಂದ್ರಗಳು ಸೇರಿದಂತೆ ತಾಲೂಕು ಆಸ್ಪತ್ರೆಯಲ್ಲಿ ಹಣ್ಣು ಬ್ರೆಡ್ ವಿತರಣೆ ಮಾಡಲಾಗುತ್ತಿದ್ದೂ ನಿರಂತರವಾಗಿ ತಾಲೂಕಿನಲ್ಲಿ ಇಪ್ಪತ್ತು ದಿನಗಳಕಾಲ ಹಲವಾರು ಸಾಮಾಜಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದೂ ತಿಳಿಸದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ. ಪಿ. ಎಂ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಎಸ್ಸಿ ಮೋರ್ಚಾ ಅಧ್ಯಕ್ಷರಾದ ಸಿದ್ದಾರ್ಥ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಶುಭಾ, ಸದ್ಯಸ್ಯರಾದ ಭೀಮಣ್ಣ, ರೂಪ, ವಿನಯ್, ತಿಪ್ಪೇಸ್ವಾಮಿ, ಮಂಜಣ್ಣ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಮಂಡಲದ ಮುಖ್ಯಸ್ಥರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;