;

ಸಿಂಧನೂರು : 371ಜೆ ಅನುದಾನದ ಜೊತೆಗೆ ಬೇರೆ ಜಿಲ್ಲೆಗಳಿಗೆ ನೀಡುವ ಅನುದಾನವನ್ನು ನೀಡಿದರೆ ಮಾತ್ರ ಪ್ರಗತಿ ಶಾಸಕ ನಾಡಗೌಡ…!!!

ಸಿಂಧನೂರು : 371ಜೆ ಅನುದಾನದ ಜೊತೆಗೆ ಬೇರೆ ಜಿಲ್ಲೆಗಳಿಗೆ ನೀಡುವ ಅನುದಾನವನ್ನು ನೀಡಿದರೆ ಮಾತ್ರ ಪ್ರಗತಿ ಶಾಸಕ ನಾಡಗೌಡ.
ತಾಲೂಕಿನ ಮಿನಿ ವಿಧಾನಸೌಧದ ಮುಂದೆ ಸರ್ದಾರ್ ವಲ್ಲಭಭಾಯಿ ಪಟೇಲ್,ಮಹಾತ್ಮಗಾಂದಿಜಿ,ಅಂಭೇಡ್ಕರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ತಹಸೀಲ್ದಾರ ಮಂಜುನಾಥ ರವರು ದ್ವಜಾರೋಹಣ ನೆರವೇರಿಸಿದರು.ದ್ವಜಾರೋಹಣ ಸಂದರ್ಭದಲ್ಲಿ ಶಾಸಕರಾದ ವೆಂಕಟರಾವ್ ನಾಡಗೌಡ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ,ಪಿ ಎಲ್.ಡಿ ಬ್ಯಾಂಕ ಅಧ್ಯಕ್ಷ ದೊಡ್ಡ ಬಸವರಾಜ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪೂರು ಇದ್ದರು. ಇದೇ ಸಂದರ್ಭದಲ್ಲಿ ಕೋವಿಡ್ -19 ಲಸಿಕಾ ಅಭಿಮಾನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕ ವೆಂಕಟರಾವ್ ನಾಡಗೌಡ
ಬೀದರ್‌ ಮತ್ತು ಅವಿಭಜಿತ ಕಲಬುರ್ಗಿ, ರಾಯಚೂರು ಜಿಲ್ಲೆಗಳು ಹಿಂದೆ ಹೈದರಾಬಾದ್‌ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದವು. ಆಗಸ್ಟ್ 15, 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ, ಹೈದರಾಬಾದ್‌ ನಿಜಾಮ ತನ್ನ ಸಂಸ್ಥಾನವನ್ನು ಸ್ವತಂತ್ರ ಭಾರತದಲ್ಲಿ ವಿಲೀನಗೊಳಿಸಲು ಒಪ್ಪದ ಕಾರಣ ಹೈದರಾಬಾದ್‌ ಕರ್ನಾಟಕದ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಲೇ ಇಲ್ಲ. ಅಂದಿನ ಕೇಂದ್ರ ಗೃಹ ಸಚಿವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಬಿಗಿ ನಿಲುವಿನಿಂದಾಗಿ ಹೈದರಾಬಾದ್‌ ನಿಜಾಮ ಸಂಸ್ಥಾನ 1948 ಸೆಪ್ಟೆಂಬರ್ 17 ರಂದು ಭಾರತ ಒಕ್ಕೂಟದಲ್ಲಿವಿಲೀನವಾಯಿತು.ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಆಗಷ್ಟ 15 ಆದರೆ ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು, ಸೆ.17ರಂದು ಈ ದಿನವನ್ನು ಕಲ್ಯಾಣ ಕರ್ನಾಟಕ ಉತ್ಸವ ಎಂದು ಆಚರಣೆ ಮಾಡಲಾಗುತ್ತದೆ.

ಶೈಕ್ಷಣಿಕ ಆರ್ಥಿಕ ಸಾಮಾಜಿಕ ಅಭಿವೃದ್ಧಿಯಲ್ಲಿ ಹಿಂದೆ ಇದ್ದೇವೆ ಮುಂದೆ ಸಾಗಲು ನಾವು ನಿರಂತರ ಪಕ್ಷಭೇದ ಮರೆತು ಹೋರಾಟ ಮಾಡಿ 371 ಜೆ ಇಂದ ಬರುವ ಅನುದಾನದ ಜೊತೆಗೆ ಸರಕಾರ ಬೇರೆ ಜಿಲ್ಲೆಗಳಿಗೆ ನೀಡುವ ಅನುದಾನವನ್ನು ನೀಡಬೇಕಾಗಿದೆ. ಸರಕಾರದ ಮೇಲೆ ಒತ್ತಡ ಹಾಕಿ ಹೆಚ್ಚಿನ ಅನುದಾನ ಬಿಡುಗಡೆಗೆ ಮತ್ತು ಉದ್ಯೋಗ ಭರ್ತಿಗೆ ಪ್ರಯತ್ನಿಸಬೇಕು ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಡಿವೈಎಸ್ಪಿ ವೆಂಕಟಪ್ಪ ನಾಯಕ್ ಸರಕಾರಿ ನೌಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹಿರೇಮಠ್ ಸಿಪಿಐ ಉಮೇಶ್ ಕಾಂಬಳೆ ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್ ನಗರಸಭೆ ಉಪಾಧ್ಯಕ್ಷ ಮೂರ್ತುಜಾಹುಸೇನ್ ಪ್ರಗತಿಪರ ,ಕನ್ನಡಪರ, ದಲಿತ ಪರ ಸಂಘಟನೆಯ ಮುಖಂಡರು ಭಾಗವಹಿಸಿದ್ದರು…

ವರದಿ.ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;