ಸಚಿವ ಶ್ರೀರಾಮುಲು ರಾಜೀನಾಮೆ ಕೊಟ್ಟು, ಸಹಾಯಕರನ್ನೇ ಚುನಾವಣೆಗೆ ನಿಲ್ಲಿಸಲಿ.!

ಚಿತ್ರದುರ್ಗ: ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ ಸಚಿವ ಶ್ರೀರಾಮುಲು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಮತದಾರಲ್ಲಿ ಕ್ಷಮೆ ಕೇಳಬೇಕು, ಓಬಳಪುರ ಗ್ರಾಮ ಪಂಚಾಯತಿ ದೂಡ್ಡ ಉಳರ್ತಿ ಜಿಲ್ಲಾ ಪಂಚಾಯತಿ, ಘಟಪರ್ತಿ ಗ್ರಾಮ ಪಂಚಾಯತಿ ಮನ್ನೆಕೋಟೆ ಜಿಲ್ಲಾ ಪಂಚಾಯತಿ ಹಾಗೂ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯತಿಯನ್ನು ಹಿರೇಹಳ್ಳಿ ಜಿಲ್ಲಾ ಪಂಚಾಯತಿಗೆ ಸೇರಿಸಬೇಕೆಂದು ಜಿಲ್ಲಾಡಳಿತಕ್ಕೆ ಪತ್ರಿಕಾ ಗೋಷ್ಠಿಯಲ್ಲಿ ಒತ್ತಾಯಿಸಿದರು, ಹಾಗೂ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದಲ್ಲಿ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡ ಸಚಿವಾಲಯದ ನೇರ ಸಾಲಗಳು ಪೂರ್ತಿ ಹಣ ಫಲಾನುಭವಿಗಳ ತಲುಪುತಿಲ್ಲ, ಅದರ ಬದಲಾಗಿ ಸಚಿವ ಶ್ರೀ ರಾಮುಲು ಆಪ್ತ ಸಹಾಯಕರಿಗೆ ಕಮಿಷನ್ ರೂಪದಲ್ಲಿ ಪಾಲಾಗುತ್ತಿದೆ, ಇದನ್ನು ಜಿಲ್ಲಾಡಳಿತ ತನಿಖೆ ಮಾಡಬೇಕು, ಆಪ್ತ ಸಹಾಯಕರಿಂದ ಕಾರ್ಯಕ್ರಮಗಳನ್ನು ಚಾಲನೆ ಮಾಡಿಸುವ ಶ್ರೀ ರಾಮುಲು ತಕ್ಷಣ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಮತದಾರರಲ್ಲಿ ಕ್ಷಮೆ ಕೇಳಬೇಕು ಹಾಗೂ ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಸ್ಥಾನ ಗಳಿಸುತ್ತದೆ, ಮತದಾರರು ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ರೆಡ್ಡಿ, ತಳಕು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ದೂಡ್ಡ ಉಳ್ಳರ್ತಿ, ಮಾಜಿ ತಾ.ಪಂ ಅಧ್ಯಕ್ಷರಾದ ಕೆ.ತಿಪ್ಪೇಸ್ವಾಮಿ, ದೇವರೆಡ್ಡಿಹಳ್ಳಿ ಗ್ರಾ.ಪಂ ಅಧ್ಯಕ್ಷರಾದ ಬೂಮ್ಮಣ್ಣ, ಮುಖಂಡರಾದ ಯಾದಲಗಟ್ಡೆ ಜಗನ್ನಾಥ್, ಮುಂತಾದವರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend