ಅಥಣಿ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯ ಮೇಲೆ ಎಸಿಬಿ ದಾಳಿ ನಡೆದ ಘಟನೆ…!!!

-ಅಥಣಿ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯ ಮೇಲೆ ಎಸಿಬಿ ದಾಳಿ ನಡೆದ ಘಟನೆ.

ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪವಿಭಾಗದ ಅಧಿಕಾರಿಗಳಾದ AEE ರಾಜೇಂದ್ರ ಫರಣಾಳಕ ಮತ್ತು ಧೀಪಕ್ ಕುಲಕರ್ಣಿ ಇವರ ಮೇಲೆ ಭ್ರಷ್ಟಾಚಾರ ನಿಗ್ರಹ(ACB)ದಾಳಿ ನಡೆದಿದೆ.

ಜಲ ಜೀವನ ಮಿಷನ್ ಯೋಜನೆ ಆರ್ ಒ ದ ಬಿಲ್ಲ್ ಮಂಜೂರಾತಿ ಮಾಡುವ ಸಲುವಾಗಿ ಬೆಳಗಾವಿ ಗುತ್ತಿಗೆಗಾರರಿಂದ ಲಂಚದ ಬೇಡಿಕೆ 3%ಇಟ್ಟಿದ್ದರು, ಈ ಕುರಿತಂತೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದರು…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend