ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದಲ್ಲಿ (ಸೆಪ್ಟೆಂಬರ್-25) ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರದಂದು ವಾಲಿಬಾಲ್ ಟೂರ್ನಮೆಂಟ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಎಂ.ಎಲ್.ಕೆ ಯಂಗ್ ಸ್ಟಾರ್ಸ್ ಸಂಯುಕ್ತಾಶ್ರಯದಲ್ಲಿ ಮೂರನೇ ಬಾರಿಗೆ ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀರಾಮುಲು ಆಪ್ತ ಕಾರ್ಯದರ್ಶಿ ಪಾಪೇಶ್ ಅವರು ಉದ್ಘಾಟನೆ ಮಾಡಿ ಮಾತನಾಡಿದರು, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ ಲಕ್ಷ್ಮಣ್, ನಂತರ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರು ಹಾಗೂ ಖ್ಯಾತ ಉದ್ಯಮಿಗಳಾದ ಕೆ. ಸಿ.ವೀರೇಂದ್ರ ಪಪ್ಪಿಯವರು ನೆರವೇರಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಿದ್ದಯ್ಯನಕೋಟೆ ಮಠದ ಶ್ರೀ ಬಸವಲಿಂಗ ಮಹಾಸ್ವಾಮೀಜಿ ಯವರು ವಹಿಸಿದ್ದರು. ಇನ್ನು ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಯುವ ಮುಖಂಡರಾದ ಬಿ ವಿಜಯ್, ಪಟ್ಟಣ ಪಂಚಾಯತಿ ಸದಸ್ಯರಾದ ಖಾದರ್, ಗ್ರಾ.ಪಂ ಉಪಾಧ್ಯಕ್ಷರಾದ ಪಾಲಯ್ಯ, ಗ್ರಾ.ಪಂ ಸದಸ್ಯರಾದ ತಿಪ್ಪೇಸ್ವಾಮಿ, ಮುಖಂಡರಾದ ಶ್ರೀನಿವಾಸ್, ಗೋಪಾಲ, ಕಾಂತರಾಜ್, ಹಾಗೂ ಕಾರ್ಯಕ್ರಮದ ಆಯೋಜಕರಾದ ಫಯಾಜ್ ರಬ್ಬು ಸೇರಿದಂತೆ ಹಲವರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
