ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಗಡಿಗ್ರಾಮವಾದ ಕಣಕುಪ್ಪೆಗೆ ಶುಕ್ರವಾರದಿಂದ ರಾಜ್ಯಸಾರಿಗೆ ಬಸ್ ಸಂಚಾರವನ್ನು ಮರು ಆರಂಭಿಸಲಾಗಿದೆ. ಇಲ್ಲಿಯ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಬಸ್ ವ್ಯವಸ್ಥೆ ಇಲ್ಲದೇ ನಿತ್ಯ 8 ಕಿ.ಮೀ ದೂರ ನಡೆದುಕೊಂಡು ಹೋಗುವ ಅನಿವಾರ್ಯತೆ ಎದುರಾಗಿತ್ತು. ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಈ ಕುರಿತು ಫೆ. 21ರಂದು ಗ್ರಾಮದಲ್ಲಿ ನಡೆದಿದ್ದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಗ್ರಾಮಸ್ಥರು ಬಸ್ ಸೇವೆಗೆ ಮನವಿ ಮಾಡಿದ್ದರು. ತಕ್ಷಣದಿಂದ ಬಸ್ ಸೇವೆ ಆರಂಭಿಸಲಾಗಿತ್ತು. ಆದರೆ ಕೋವಿಡ್ ಲಾಕ್ಡೌನ್ ನಂತರ ಬಸ್ ಸ್ಥಗಿತವಾಗಿತ್ತು. ಈಗ ಶಾಲೆ-ಕಾಲೇಜು ಮರು ಆರಂಭವಾಗಿದ್ದು ವಿದ್ಯಾರ್ಥಿಗಳು ಬಸ್ ಬಾರದ ಪರಿಣಾಮ ನಡೆದುಕೊಂಡು ಶಾಲೆಗಳಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣ ಅಧಿಕಾರಿಗಳು ಎಚ್ಚೆತ್ತುಕೊಂಡು ಬಸ್ ಸೇವೆಯನ್ನು ಮರು ಆರಂಭಿಸಲು ಕ್ರಮ ಕೈಗೊಂಡಿದ್ದಾರೆ….

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
