ಸಿಂಧನೂರು :ಗಾಂಧೀಜಿಯ ಕನಸು ಗ್ರಾಮ ಸ್ವರಾಜ್ಯ ಮಾಡುವುದು ಹಂಪನಗೌಡ ಬಾದರ್ಲಿ…!!!

ಸಿಂಧನೂರು :ಗಾಂಧೀಜಿಯ ಕನಸು ಗ್ರಾಮ ಸ್ವರಾಜ್ಯ ಮಾಡುವುದು ಹಂಪನಗೌಡ ಬಾದರ್ಲಿ.

ಇಂದು ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ.ಹಂಪನಗೌಡ ಬಾದರ್ಲಿ ಮಾಜಿ ಶಾಸಕರು ಇವರ ಅಧ್ಯಕ್ಷತೆಯಲ್ಲಿ 75ನೇ ಅಮೃತ ಮಹೋತ್ಸವ ಅಂಗವಾಗಿ ಅಕ್ಟೋಬರ್ 2ರಿಂದ ಅಕ್ಟೋಬರ್ 31ರವರೆಗೆ ಮಹಾತ್ಮ ಗಾಂಧೀಜಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಒಂದು ವಾರ್ಡ್ ಗೆ ಒಂದು ದಿನ ಹಮ್ಮಿಕೊಂಡಿದ್ದು, ಇಂದು ಶ್ರೀ ವಳಕೋಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಂಪನಗೌಡ ಬಾದರ್ಲಿ ಗಾಂಧೀಜಿಯವರಿಗೆ ಅಹಿಂಸೆಯೇ ಅವರ ಅಸ್ತ್ರವಾಗಿತ್ತು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಗಳನ್ನು ಸ್ಮರಿಸಬಹುದು.ಸ್ವಾತಂತ್ರ್ಯ ಹೋರಾಟಕ್ಕೆ ಗಾಂಧೀಜಿಯವರ ಚಿಂತನೆಗಳನ್ನು ಮತ್ತು ತತ್ವಶಾಸ್ತ್ರಗಳನ್ನು ಪ್ರಚಾರ ಮಾಡುವ ಅನೇಕ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಲಾಗುತ್ತದೆ. ಗಾಂಧೀಜಿಯವರ ಜೀವನ ಮತ್ತು ಆದರ್ಶಗಳು ಜನರ ಜೀವನದ ಮೇಲೆ ಪ್ರಭಾವ ಬೀರುತ್ತಲೇ ಇರುತ್ತದೆ.ಸ್ವಾತಂತ್ರ ಬಂದು 75 ವರ್ಷಗಳಲ್ಲಿ 54ವರ್ಷಗಳ ಕಾಲ ಕಾಂಗ್ರೆಸ್ ಆಳ್ವಿಕೆ ಮಾಡಿದೆ.ಇಲ್ಲಿಯವರೆಗೆ ಕಾಂಗ್ರೆಸ್ ಸರ್ಕಾರದ ಪ್ರಧಾನಿಗಳೆಲ್ಲ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಬಡತನ ನಿರ್ಮೂಲನೆ, ನಿರುದ್ಯೋಗ ಸಮಸ್ಯೆ, ನೀರಾವರಿ ಯೋಜನೆಗಳು, ವಿಶ್ವವಿದ್ಯಾಲಯಗಳು, ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು,ವಿದ್ಯುಚ್ಛಕ್ತಿ, ಕುಡಿಯುವ ನೀರು ಇವೆಲ್ಲಾವೂ ಕಾಂಗ್ರೆಸ್ ಆಡಳಿತದಲ್ಲಿ ಜಾರಿಗೊಳಿಸಲಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಡೀಸೆಲ್, ಪೆಟ್ರೋಲ್, ಗ್ಯಾಸ್ ಸಿಲಿಂಡರ್, ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿವೆ ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ಖಾಜಿ ಮಲ್ಲಿಕ್ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಿರುಪಾದೇಪ್ಪ ವಕೀಲರು, ನಿಂಗಪ್ಪ ದಡೆಸೂಗೂರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ನಗರಸಭಾ ಅಧ್ಯಕ್ಷರು ಹಾಗೂ ಸದಸ್ಯರು,ಮುಂಚೂಣಿ ಘಟಕಗಳ ಅಧ್ಯಕ್ಷರು, ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಕಾರ್ಯಕರ್ತರು, ಭಾಗವಹಿದ್ದರು..

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend