ಕೇರಳದ ಮೂಲದ ವಿದ್ಯಾರ್ಥಿನಿ ಮಂಗಳೂರಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ!!!!!

ಕೇರಳದ ಮೂಲದ ವಿದ್ಯಾರ್ಥಿನಿ ಮಂಗಳೂರಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ!!!!!

ಮಂಗಳೂರು: ಕೇರಳದ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಮಂಗಳೂರಿನ ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ತನ್ನ ಡೈರಿಯಲ್ಲಿ ವಿದ್ಯಾರ್ಥಿನಿ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರು ಕದ್ರಿಯಲ್ಲಿ ಈ ಘಟನೆ ನಡೆದಿದ್ದು, 19 ವರ್ಷ ವಯಸ್ಸಿನ ನೀನಾ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದು, ಇವರು ಕೇರಳದ ಕಾಸರಗೋಡಿನ ನಿವಾಸಿಯಾಗಿದ್ದಾರೆ. ನಗರದ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.

ತಮ್ಮ ಡೆತ್ ನೋಟ್ ನಲ್ಲಿ, ತಾಯಿಗೆ ಕಷ್ಟ ಇದೆ. ನನ್ನ ವಿದ್ಯಾಭ್ಯಾಸದ ಆರ್ಥಿಕ ಹೊರೆಯಾಗುತ್ತಿದೆ. ನನಗೂ ವಿದ್ಯಾಭ್ಯಾಸಕ್ಕೆ ಪೂರ್ಣ ಗಮನ ನೀಡಲಾಗುತ್ತಿಲ್ಲ. ವಿದ್ಯಾಭ್ಯಾಸದಲ್ಲಿಯೂ ಹಿಂದೆ ಬಿದ್ದಿದ್ದೇನೆ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend