ಮೊಳಕಾಲ್ಮೂರು: ರಾಂಪುರದಲ್ಲಿ ಸರ್ಕಾರದ ಶಿಕ್ಷಣ ವ್ಯವಸ್ಥೆ ಕೊರತೆ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ದೊಡ್ಡ ಗ್ರಾಮವಾಗಿರುವ ದೇವಸಮುದ್ರ ಹೋಬಳಿಯ ರಾಂಪುರದಲ್ಲಿ ಸರ್ಕಾರದ ಶಿಕ್ಷಣ ವ್ಯವಸ್ಥೆ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಬೆಂಗಳೂರು-ಬಳ್ಳಾರಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ರಾಂಪುರವು ಮೊಳಕಾಲ್ಮುರು, ಸಂಡೂರು, ಕೂಡ್ಲಿಗಿ ಹಾಗೂ ಸೀಮಾಂಧ್ರ ಗಡಿಭಾಗದ 35-40 ಗ್ರಾಮಗಳಿಗೆ ಶೈಕ್ಷಣಿಕವಾಗಿ, ವ್ಯಾವಹಾರಿಕವಾಗಿ ಕೇಂದ್ರ ಸ್ಥಳವಾಗಿದೆ ಗ್ರಾಮದಲ್ಲಿ 15,000 ಜನಸಂಖ್ಯೆ ಇದ್ದು, ಜಿಲ್ಲೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಗ್ರಾಮ ಎಂಬ ಹೆಗ್ಗಳಿಕೆಗೆ ಸಹ ಪಾತ್ರವಾಗಿದೆ.

ರಾಂಪುರದಲ್ಲಿ 1ರಿಂದ 8ನೇ ತರಗತಿಯವರೆಗೆ ಮಾತ್ರ ಸರ್ಕಾರಿ ಶಿಕ್ಷಣ ವ್ಯವಸ್ಥೆಯಿದೆ. ಹೆಚ್ಚಿನ ಸರ್ಕಾರಿ ಶಿಕ್ಷಣಕ್ಕೆ ಗ್ರಾಮದ ಖಾಸಗಿ ಶಾಲೆಗಳು, ದೇವಸಮುದ್ರ ಸರ್ಕಾರಿ ಪ್ರೌಢಶಾಲೆ, ಮೊಳಕಾಲ್ಮುರು ಹಾಗೂ ಬಳ್ಳಾರಿಯ ಶಾಲೆಗಳನ್ನು ಅವಲಂಬಿಸ
ಬೇಕಾಗಿದೆ. ರಾಂಪುರದಲ್ಲಿ ಸರ್ಕಾರಿ ಪ್ರೌಢಶಾಲೆ ಆರಂಭಿಸಬೇಕು ಎಂಬ ಕೂಗು ಹತ್ತಾರು ವರ್ಷಗಳಿಂದ ಕೇಳಿ ಬರುತ್ತಿದ್ದರೂ ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ಮಂಜೂರಾತಿ ನೀಡುತ್ತಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿ
ಯೊಬ್ಬರು ಮಾಹಿತಿ ನೀಡಿದರು.

ಹೋಬಳಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರು, ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸವಿದ್ದು, ಜೀವನ ನಿರ್ವಹಣೆಗೆ ತೊಂದರೆ ಅನುಭವಿಸುತ್ತಿದ್ದಾರೆ. ಹೋಬಳಿಯ ಸಾಕಷ್ಟು ಸರ್ಕಾರಿ ಶಾಲೆಗಳ ಶಿಕ್ಷಕ ಹುದ್ದೆಗಳು ಖಾಲಿ ಇವೆ. ರಾಂಪುರದಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಿಸಿದಲ್ಲಿ ಹತ್ತಾರು ಗ್ರಾಮಗಳಿಗೆ ಅನುಕೂಲವಾಗಲಿದೆ. ಈ ಬಗ್ಗೆ ಇನ್ನಾದರೂ ಸಂಬಂಧಪಟ್ಟವರು ಗಮನಹರಿಸಬೇಕು’ ಎಂದು ಮನವಿ ಮಾಡಲಾಗಿದೆ…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend