ಸಿಂಧನೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ
ಕುನ್ನಟಗಿ ಹೋಬಳಿಯ ತಿಪ್ಪನಹಟ್ಟಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಬಿ. ಸಿ. ಸತೀಶ ರವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮಾಜಿ ಸಚಿವರು ಮತ್ತು ಶಾಸಕರಾದ ವೆಂಕಟರಾವ್ ನಾಡಗೌಡ ಅಧ್ಯಕ್ಷತೆ ವಹಿಸಿದ್ದರು. ಮಾನ್ಯ ದಂಡಾದಿಕಾರಿ ಮಂಜುನಾಥ ಭೋಗಾವತಿ,ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪವನಕುಮಾರ, ಗಣ್ಯವ್ಯಕ್ತಿಗಳು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ್ ಹಳ್ಳಿಗಳ ಜನರು ಸಣ್ಣಪುಟ್ಟ ಸಮಸ್ಯೆಗಳಿಗೂ ಜಿಲ್ಲಾಧಿಕಾರಿ, ತಹಸಿಲ್ದಾರ್ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸರ್ಕಾರ ಈ ಕಾರ್ಯಕ್ರಮ ರೂಪಿಸಲಾಗಿದೆ. ಪಿಂಚಣಿ, ಪೌತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಸ್ಮಶಾನ ಅಭಿವೃದ್ಧಿ ಇನ್ನೂ ಮುಂತಾದ ಅರ್ಜಿಗಳನ್ನು ಕಂದಾಯ ಇಲಾಖೆ ಇತ್ಯರ್ಥಗೊಳಿಸಲಾಗುತ್ತದೆ. ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕಾರ್ಡುದಾರರಿಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಒಂದುವರೆ ಲಕ್ಷ ಸಹಾಯಧನ ನೀಡಲಾಗುವುದು. ಇದನ್ನು ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳು ಪಡೆದುಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ಮನವರಿಕೆ ಮಾಡಿದರು.
ಕಂದಾಯ ಇಲಾಖೆ ಆರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಳೆಗಾಲದಲ್ಲಿ ದೇವರಗುಡಿಯಿಂದ ಪಗಡದಿನ್ನಿಗೆ ಶಾಲೆಗೆ ಹೋಗಬೇಕಾದರೆ ಇಪ್ಪತ್ತು ಕೀಲೊ ಮೀಟರ್ ಸುತ್ತಿಕೊಂಡು ಬರಬೇಕಾಗುತ್ತದೆ.ನಮಗೆ ಮೇಲ್ಸೇತುವೆ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮತ್ತು ಶಾಸಕರಿಗೆ ಮನವಿ ಮಾಡಿದರು.ಶಾಸಕರು ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದಾಗ ಪಿ.ಎಮ್.ಜೆ.ಎಸ್. ವಾಯ್.ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ, ಮೂರು ಕೋಟಿ ಮಂಜೂರಾಗಿದೆ, ಟೆಂಡರ್ ಕೂಡಾ ಕರೆಯಲಾಗಿದೆ,ಮಳೆಗಾಲ ಪ್ರಾರಂಭವಾಗುವುದರವೊಳಗೆ ಶೀಘ್ರದಲ್ಲಿ ಕೆಲಸ ಪ್ರಾರಂಭಿಸಲಾಗುವುದು ಎಂದು ಉತ್ತರ ನೀಡಿದರು. ಸ್ತ್ರೀಶಕ್ತಿ ಗುಂಪುಗಳ ಮಹಿಳೆಯರು ಸಾಲ ಮತ್ತು ಸರ್ಕಾರದಿಂದ ಬರುವ ಇನ್ನಿತರ ಸೌಲಭ್ಯಗಳು ನೀಡಲು ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಕ್ಷಣ ಪರಿಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಮಹಿಳೆಯರು ಮದ್ಯಪಾನ ನಿಷೇಧ ಮಾಡಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಆದರೆ ಇದರ ಬಗ್ಗೆ ಜಿಲ್ಲಾಧಿಕಾರಿ,ಸಂಭಂಧಪಟ್ಟ ಇಲಾಖೆಯವರೇ ಉತ್ತರ ಕೊಡುತ್ತಾರೆ ಎಂದರು. ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿ ಇದು ನಮ್ಮ ಕೈಯಲ್ಲಿ ಸಾಧ್ಯವಿಲ್ಲ, ಇದರ ಬಗ್ಗೆ ಸರಕಾರ ಕ್ರಮ ಕೈಗೊಳ್ಳಬೇಕು. ಆದರೆ ಕಿರಾಣಿ ಅಂಗಡಿಗಳಲ್ಲಿ, ಪಾನ್ ಶಾಪುಗಳಲ್ಲಿ, ಇನ್ನಿತರ ಅನಧಿಕೃತವಾಗಿ ಮಾರಾಟ ಮಾಡುವುದನ್ನು ಕಂಡುಬಂದರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಉತ್ತರ ನೀಡಿದರು. ಜನಸಾಮಾನ್ಯರಿಗೆ ಸ್ವಂತ ಮನೆ ಕಟ್ಟಲು ಮರಳು ಸಮಸ್ಯೆಯಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ತಮ್ಮ ನೋವನ್ನು ತೋಡಿಕೊಂಡರು. ಮಾನ್ಯ ಜಿಲ್ಲಾಧಿಕಾರಿಗಳು 9ಕೆಟಗೆರಿಯಲ್ಲಿ 1,2,3 ಗ್ರಾಮ ಪಂಚಾಯತ್ ಮಟ್ಟದಲ್ಲಿ 1 ಟನ್ ಗೆ 300 ರೂ. ರಾಯಲ್ಟಿ ಪಡೆದು ಮರಳು ಪಡೆಯುವ ವ್ಯವಸ್ಥೆ ಶೀಘ್ರವಾಗಿ ಮಾಡಲಾಗುವುದು ಎಂದು ತಿಳಿಸಿದರು. ವೃದ್ಧಾಪ್ಯ ವೇತನ ಅಂಗವಿಕಲರಿಗೆ ದ್ವಿಚಕ್ರ ವಾಹನ, ಶುದ್ಧ ಕುಡಿಯುವ ನೀರು, ರಸ್ತೆಗಳು,ಶಾಲೆಗಳು, ಸ್ಮಶಾನ ಅಭಿವೃದ್ಧಿ, ಹೀಗೆ ಇನ್ನಿತರ ಜನರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಿದ್ದು, ಈ ಪೈಕಿ ಕೆಲವು ಅರ್ಜಿಗಳನ್ನು ಸ್ಥಳದಲ್ಲಿ ಇತ್ಯರ್ಥ ಪಡಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ್ ಹಳ್ಳಿಗಳ ಜನರು ಸಣ್ಣಪುಟ್ಟ ಸಮಸ್ಯೆಗಳಿಗೂ ಜಿಲ್ಲಾಧಿಕಾರಿ, ತಹಸಿಲ್ದಾರ್ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸರ್ಕಾರ ಈ ಕಾರ್ಯಕ್ರಮ ರೂಪಿಸಲಾಗಿದೆ. ಪಿಂಚಣಿ, ಪೌತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಸ್ಮಶಾನ ಅಭಿವೃದ್ಧಿ ಇನ್ನೂ ಮುಂತಾದ ಅರ್ಜಿಗಳನ್ನು ಕಂದಾಯ ಇಲಾಖೆ ಇತ್ಯರ್ಥಗೊಳಿಸಲಾಗುತ್ತದೆ. ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕಾರ್ಡುದಾರರಿಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಒಂದುವರೆ ಲಕ್ಷ ಸಹಾಯಧನ ನೀಡಲಾಗುವುದು. ಇದನ್ನು ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳು ಪಡೆದುಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ, ಸಮಾಜಕಲ್ಯಾಣ ಇಲಾಖೆ , ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ , ಜೆಸ್ಕಾಂ ಇಲಾಖೆ ,ಸಾರಿಗೆ ಇಲಾಖೆ , ನೀರು ಮತ್ತು ನೈರ್ಮಲ್ಯ ಇಲಾಖೆ, ಕಂದಾಯ ಇಲಾಖೆ, ಅಬಕಾರಿ ಇಲಾಖೆ, ಇನ್ನೂ ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿ ತಮ್ಮ ತಮ್ಮ ಇಲಾಖೆಗಳಲ್ಲಿ ದೊರೆಯುವ ಸರ್ಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ತಿಳಿಸಿದರು…
ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
