;

ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ…!!!

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೆ.25ಕ್ಕೆ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ತಿಳಿಸಿದರು.
ಪಟ್ಟಣದ ತಮ್ಮ ನಿವಾಸದ ಆವರಣದಲ್ಲಿ ಶನಿವಾರ ಕಾಂಗ್ರೆಸ್ ಸೇರ್ಪಡೆ ಸಂಬಂಧ ಆಯೋಜಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
2018ರ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ತಾಲೂಕಿನ 13 ಸಾವಿರ ಮತದಾರರು ನನ್ನನ್ನು ಆಶೀರ್ವದಿಸಿದ್ದರು. ಅವರ ಋಣ ತೀರಿಸಲು ನಮ್ಮ ಕೆಲಸವಾಗಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳು, ಕೇಂದ್ರ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿ ಜನ ಸಾಮಾನ್ಯರಿಗೆ ಧ್ವನಿಯಾಗಿ ಕೆಲಸ ಮಾಡಿರುವ ಹಿನ್ನೆಲೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ವಿನಹ ಯಾವುದೇ ಅಧಿಕಾರದ ಆಸೆಗಾಗಿ ಅಲ್ಲ ಎಂದರು.
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯದಲ್ಲೂ ಬಿಜೆಪಿ ಅಧಿಕಾರ ನಡೆಸುತ್ತಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹೀಗೆ ಹಲವಾರು ಬೆಲೆ ಏರಿಕೆ, ಕಾಯ್ದೆಗಳ ತಿದ್ದುಪಡಿ ಮಾಡುವ ಮೂಲಕ ರೈತಾಪಿ ವರ್ಗ, ಕೂಲಿಕಾರ್ಮಿಕರು, ಜನ ಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ ಇದರಿಂದ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಾಂಗ್ರೆಸ್ ಅಧಿಕಾರಕ್ಕೆ ತರುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಕೈ ಬಲಪಡಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಶ್ರಮಿಸಲಿದ್ದಾರೆ. ಹಾಗಾಗಿ ಸೆ.25ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಲಾಗುವುದು ಎಂದರು.
ಜೆಡಿಎಸ್ ತಾಲೂಕಾಧ್ಯಕ್ಷ ಗುರುಸಿದ್ದಪ್ಪ ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ 15 ವರ್ಷಗಳಿಂದ ಕೆಲಸ ಮಾಡಿ ಪಕ್ಷ ಕಟ್ಟಿದ್ದೇವೆ, ಆದರೆ ಸರ್ಕಾರ ಬಂದಾಗಲೂ ಕಾರ್ಯಕರ್ತರಿಗೆ ಯಾವುದೇ ಅನುಕೂಲಗಳಾಗಿಲ್ಲ, ಇದರಿಂದ ಕೆಲವರು ಬೇಸತ್ತು ಪಕ್ಷ ತೊರೆಯುತ್ತಿದ್ದಾರೆ. ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಅವರಿಗೆ ನಮ್ಮ ಬೆಂಬಲವಿದೆ ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಎಸ್ ರಾಜು ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ ಸಾಕಷ್ಟು ರಾಜಕಾರಣಿಗಳು ಬೆಳೆದು ದೊಡ್ಡಮಟ್ಟದಲ್ಲಿ ಅಧಿಕಾರ ನಡೆಸಿದ್ದಾರೆ. ಬದಲಾವಣೆ ಜಗದ ನಿಯಮವಾಗಿದೆ. ಚಿಕ್ಕಮ್ಮನಹಟ್ಟಿ ದೇವೇಂದ್ರ ನೇತೃತ್ವದಲ್ಲಿ ನೂರಾರು ಮಂದಿ ಕಾಂಗ್ರೆಸ್ ಸೇರುತ್ತಿರುವುದು ಉತ್ತಮ ನಡೆ, ಆದರೆ ಮುಂದಿನ ಚುನಾವಣೆಯಲ್ಲಿ ದೇವೇಂದ್ರಪ್ಪ ಅವರಿಗೆ ಟಿಕೆಟ್ ಕೊಟ್ಟರೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಬಿಳಿಚೋಡು ರಂಗಸ್ವಾಮಿ, ಬಸವನಕೋಟೆ ರಸೂಲ್ ಖಾನ್, ಅಣಜಿಗೆರೆ ಪ್ರಭು, ಗೋಡೆ ಸಿದ್ದೇಶ್, ಅಂಜಿನಪ್ಪ, ಚಿಕ್ಕಮ್ಮನಹಟ್ಟಿ ಹನುಮಂತಪ್ಪ, ಮುಸ್ಟೂರು ಪುಟ್ಟಣ್ಣ ಸೇರಿದಂತೆ ಮತ್ತಿತರಿದ್ದರು…

ವರದಿ. ಸಂದೀಪ್, ಜಗಳೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;