;

ಹಸಿವು ಸೂಚ್ಯಂಕ: ಪಾಕ್‌, ಬಾಂಗ್ಲಾ, ನೇಪಾಳಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಭಾರತ…!!!

ಹಸಿವು ಸೂಚ್ಯಂಕ: ಪಾಕ್‌, ಬಾಂಗ್ಲಾ, ನೇಪಾಳಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಭಾರತ

ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ ಹಿಂದುಳಿದಿದೆ.

ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ 76, ಮ್ಯಾನ್ಮಾರ್‌ 71 ಮತ್ತು ಪಾಕಿಸ್ತಾನ 92ನೇ ರ‍್ಯಾಂಕ್‌ ಪಡೆದಿವೆ.

ಚೀನಾ, ಬ್ರೆಜಿಲ್‌ ಮತ್ತು ಕುವೈತ್‌ ಸೇರಿದಂತೆ 18 ರಾಷ್ಟ್ರಗಳು ಮೊದಲ ಸ್ಥಾನವನ್ನು ಹಂಚಿಕೊಂಡಿವೆ. ಆದರೆ ಭಾರತ 101ನೇ ರ‍್ಯಾಂಕ್‌ಗೆ ಕುಸಿದಿರುವುದು ಕಳವಳಕಾರಿಯಾಗಿದೆ

ಜಾಗತಿಕ ಹಸಿವು ಸೂಚ್ಯಂಕ(ಜಿಎಚ್‌ಐ) ರಾಷ್ಟ್ರಗಳಲ್ಲಿನ ಹಸಿವಿನ ಮತ್ತು ಅಪೌಷ್ಟಿಕತೆಯ ಪ್ರಮಾಣವನ್ನು ಅಧ್ಯಯನ ಮಾಡಿ ಅಂಕ ನೀಡುತ್ತದೆ. ಐರ್ಲೆಂಡ್‌ನ ಧನಸಹಾಯ ಹೊಂದಿರುವ ಏಜೆನ್ಸಿ ಕನ್ಸರ್ನ್‌ ವರ್ಲ್ಡ್‌ವೈಡ್‌ ಮತ್ತು ಜರ್ಮನಿಯ ಸಂಸ್ಥೆ ವೆಲ್ಟ್‌ ಹಂಗರ್‌ ಹೆಲ್ಪ್‌ ಸಹಯೋಗದಲ್ಲಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ವಿಶ್ವದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಎತ್ತರಕ್ಕೆ ಸಮನಾದ ತೂಕವನ್ನು ಹೊಂದಿರದ ಮಕ್ಕಳು ಭಾರತದಲ್ಲಿದ್ದಾರೆ. 2016-2020ರ ನಡುವೆ ಎತ್ತರಕ್ಕೆ ಸರಿಯಾದ ತೂಕ ಹೊಂದಿರದ ಮಕ್ಕಳ ಪ್ರಮಾಣ ಶೇಕಡಾ 17.3 ಇದೆ. 1998-2002ರ ನಡುವೆ ಈ ಪ್ರಮಾಣ ಶೇಕಡಾ 17.1 ಇತ್ತು ಎಂದು ಜಿಎಚ್‌ಐ ವರದಿ ಹೇಳಿದೆ.

ಕಳವಳಕಾರಿಯಾಗಿದೆ. ಕಳೆದ ವರ್ಷ 107 ರಾಷ್ಟ್ರಗಳ ಪೈಕಿ 94ನೇ ಸ್ಥಾನದಲ್ಲಿತ್ತು…

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;