;

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸರಳವಾಗಿ ಆಚರಣೆ…!!!

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸರಳವಾಗಿ ಆಚರಣೆ

ಕಲಬುರಗಿ,ಅ.20(ಕ.ವಾ) – ಕೋವಿಡ್ ಹಿನ್ನೆಲೆಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಡಿ.ಸಿ.ಪಿ ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ, ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಸಮಿತಿಯ ಅಧ್ಯಕ್ಷ ನಂದಕುಮಾರ ಮಾಲಿಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ. ಅಲ್ಲಾಭಕ್ಷ, ಮುಖಂಡ ಚೆನ್ನಪ್ಪ ಸುರಪುರ, ಎಸ್.ಟಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾನಪ್ಪ ನಾಯಕ ಸೇರಿದಂತೆ ಇನ್ನಿತರ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು…

ವರದಿ. ಬಸವರಾಜ್ ಹಿರೇಮಠ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;