;

ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ದಲಿತರ ಸಮಸ್ಯೆ ಪರಿಹಾರಕ್ಕೆ ಒಂದಾದ ಸಂಘಟನೆಗಳು: ಮಹತ್ವದ ಸಭೆ…!!!

ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ದಲಿತರ ಸಮಸ್ಯೆ ಪರಿಹಾರಕ್ಕೆ ಒಂದಾದ ಸಂಘಟನೆಗಳು: ಮಹತ್ವದ ಸಭೆ
dalith meeting tumakuru

ತುಮಕೂರು: ತುಮಕೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ದಲಿತರ ಹಳ್ಳಿಗಳಲ್ಲಿ ಇರುವ ಸಮಸ್ಯೆಗಳು, ಕುಂದುಕೊರತೆಗಳ ಕುರಿತು ವಿವಿಧ ಸಂಘಟನೆಗಳ ಮುಖಂಡರು ತುಮಕೂರು ಜಿಲ್ಲೆಯ ಅಮಾನಿಕೆರೆಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಚರ್ಚೆ ನಡೆಸಿದರು.

ಬೆಳ್ಳಿಬಟ್ಲಹಳ್ಳಿಯಲ್ಲಿ ಊರ್ಡಿಗೆರೆ ತಾಲ್ಲೂಕು ಮತ್ತು ಗ್ರಾಮದಲ್ಲಿ ಸಾರ್ವಜನಿಕರು ಓಡಾಡಲು ರಸ್ತೆ ಇಲ್ಲದೆ ಇರುವುದರ ಬಗ್ಗೆ ಮತ್ತು ಗೂಳೂರು ಹೋಬಳಿ ತುಮಕೂರು ತಾಲ್ಲೂಕು ಕೋಡಿಪಾಳ್ಯ ಗ್ರಾಮದ ವಿವಿಧ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಮುಖಂಡರು ಚರ್ಚೆ ನಡೆಸಿದರು.

ಈ ಗ್ರಾಮಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸುವುದು ಹಾಗೂ ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸದೇ ನಿರ್ಲಕ್ಷ್ಯ ತೋರಿದರೆ, ತೀವ್ರ ಪ್ರತಿಭಟನೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾಧ್ಯಕ್ಷ ನಟರಾಜು ಜಿ.ಎಲ್., ಅಖಿಲ ಭಾರತ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾದ ನಿಧಿಕುಮಾರ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷರಾದ ಪಿ.ಎನ್.ರಾಮಯ್ಯ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ರಾಜೇಶ್ ಹಾಗೂ ನರಸಿಂಹ ರಾಜು ಮತ್ತು ವಿವಿಧ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;