;

ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? | ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ…?

ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? | ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ…?

ಬೆಂಗಳೂರು: ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಕಿವಿ ಹಿಂಡಿದ್ದಾರೆ.

ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? ಎಂದು ಪ್ರಶ್ನಿಸಿದ್ದಾರೆ.

ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಇಲ್ಲಿಯವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ? ಎಂದು ಅವರು ಪ್ರಶ್ನಿಸಿದ್ದಾರೆ.

ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;