ಮೊಳಕಾಲ್ಮುರು: ಆಟೋ ನಿಲ್ದಾಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ.!

ಮೊಳಕಾಲ್ಮುರು: ಆಟೋ ನಿಲ್ದಾಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ.!

ಚಿತ್ರದುರ್ಗ: (ಅಕ್ಟೋಬರ್-30) ಇಂದು ಮೊಳಕಾಲ್ಮೂರು ಪಟ್ಟಣದ ಆಟೋ ನಿಲ್ದಾಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಐದು ನಿಮಿಷ ಆಚರಣೆ ಮಾಡಲಾಯಿತು. ಕರವೇ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಾತನಾಡಿ ತಮ್ಮ ಅದ್ಭುತ ನಟನೆ ಮತ್ತು ಸಮಾಜ ಸೇವಾ ಕಾರ್ಯಗಳಿಂದ ಕರ್ನಾಟಕದ ಮನೆ ಮಾತಾಗಿರುವ ಕನ್ನಡ ಚಿತ್ರರಂಗದ ಅಪ್ಪು ಎಂದೇ ಖ್ಯಾತಿಯಾಗಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತುಂಬಲಾರದ ನಷ್ಟವಾಗಿದೆ ಎಂದರು. ಪುನೀತ್ ರಾಜ್ ಕುಮಾರ್ ರವರು ತಮ್ಮ ಬಾಲ್ಯದಿಂದಲೇ ಕನ್ನಡ ಚಿತ್ರರಂಗದಲ್ಲಿ ತಮ್ಮ ನಟನೆಯ ಮೂಲಕ ಬೇಸರ ಅಂತವರು ಮತ್ತು ಡಾಕ್ಟರ್ ರಾಜಕುಮಾರ್ ಅವರ ಹಾದಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು 26 ಅನಾಥಾಶ್ರ, 46 ಉಚಿತ ಶಾಲೆ, 16 ವೃದ್ರಾಶ್ರಮ, 19 ಗೋಶಾಲೆ, 1800 ಮಕ್ಕಳ ಸಂಪೂರ್ಣ ಶಿಕ್ಷಣ ಹಾಗೂ ಶಕ್ತಿ ಧಾಮ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣದ ವ್ಯವಸ್ಥೆ ನೋಡಿಕೊಳ್ಳುತ್ತಿರುವ ಪುನೀತ್ ರಾಜಕುಮಾರ್ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಚಿಕ್ಕಹಳ್ಳಿ ಮಹೇಶ್, ಉಪಾಧ್ಯಕ್ಷ ಮಾರಣ್ಣ, ಅಧ್ಯಕ್ಷ ರಾಮಾಂಜನೇಯ, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷ ಸರಸ್ವತಿ, ನಾಗಸಮುದ್ರ ಪೆನ್ನಪ್ಪ , ಎರಿಸ್ವಾಮಿ, ಆಟೋ ಚಾಲಕರು, ಅಭಿಮಾನಿಗಳು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend