ಇಂದು ಜಿಲ್ಲಾಧಿಕಾರಿಗಳ ಕಾರ್ಯಲಯದ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹಾಲಪ್ಪ ಆಚಾರ ರವರ ಅಧ್ಯಕ್ಷತೆಯಲ್ಲಿ ನಡೆದ ಗಣಿ ಮತ್ತೂ ಭೂವಿಜ್ಞಾನ ˌ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.
ಸಭೆಯಲ್ಲಿ ಶಾಸಕರಾದ ಶ್ರೀ ಬಸವರಾಜ ದಢೇಸೂಗೂರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ಶ್ರೀ ರಾಮಪ್ರಸಾದ್ ಮನೋಹರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಲ್ಲಾಧಿಕಾರಿ ಶ್ರೀ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಟಿ.ಶ್ರೀಧರ್, ಅಪರ ಜಿಲ್ಲಾಧಿಕಾರಿ ಶ್ರೀ ಎಂ.ಪಿ ಮಾರುತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಹರ್ಷಕುಮಾರ್, ಉಪವಿಭಾಗಾಧಿಕಾರಿ ಶ್ರೀ ನಾರಾಯಣರೆಡ್ಡಿ ಕನಕರೆಡ್ಡಿ, ಕೊಪ್ಪಳ ಹಿರಿಯ ಭೂವಿಜ್ಞಾನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಅಕ್ಕಮಹಾದೇವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ✍️

ವರದಿ ದಾವಲ್ ಮಲ್ಲಿಕ್ ಹೋಸಮನಿ ಕೊಪ್ಪಳ ಗ್ರಾಮೀಣ ಎಚ್ಚರಿಕೆ ಕನ್ನಡ ನ್ಯೂಸ್ 24 7
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
