;

ಹೊಸಪೇಟೆ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ ಚುನಾವಣಾ ಅಧಿಕಾರಿಗಳಿಗೆ ತರಬೇತಿ ವಿಜಯನಗರ…!!!

ಹೊಸಪೇಟೆ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ ಚುನಾವಣಾ ಅಧಿಕಾರಿಗಳಿಗೆ ತರಬೇತಿ
ವಿಜಯನಗರ.

ಹೊಸಪೇಟೆ ನಗರಸಭೆ, ಹಗರಿಬೊಮ್ಮನಹಳ್ಳಿ ಪುರಸಭೆ ಹಾಗೂ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಗೆ ಹಿನ್ನಲೆಯಲ್ಲಿ ಹೊಸಪೇಟೆ ಸಂಡೂರು ರಸ್ತೆಯಲ್ಲಿರುವ ಲಿಟ್ಲ್-ಪ್ಲವರ್ ಶಾಲೆಯ ಆವರಣದಲ್ಲಿ ತಹಶೀಲ್ದಾರ್ ಹೆಚ್.ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಿಯೋಜನೆಗೊಂಡಂತಹ ಎಲ್ಲಾ ಮತಗಟ್ಟೆಯ ಅಧಿಕಾರಿಗಳಿಗೆ ಚುನಾವಣಾ ತರಬೇತಿ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಹೆಚ್.ವಿಶ್ವನಾಥ್ ಅವರು ಹೊಸಪೇಟೆ ನಗರಸಭೆ, ಹಗರಿಬೊಮ್ಮನಹಳ್ಳಿ ಪುರಸಭೆ ಹಾಗೂ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯ್ತಿಗಳಿಗೆ ಡಿ.27ರಂದು ಮತದಾನ ನಡೆಯಲಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.


ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಕಟ್ಟು-ನಿಟ್ಟಾಗಿ ಮಾದರಿ ನೀತಿ ಸಂಹಿತೆ ಪಾಲಿಸಬೇಕು ಹಾಗೂ ಚುನಾವಣಾ ತರಬೇತಿಯ ಸಂದರ್ಭದಲ್ಲಿ ನೀಡಿದ ಅಂಶಗಳನ್ನು ಚಾಚೂ ತಪ್ಪದೇ ಪಾಲಿಸುವ ಮೂಲಕ ಸುಸೂತ್ರ ಚುನಾವಣೆಗೆ ಸಹಕರಿಸಬೇಕು ಮತ್ತು ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು ಎಂದರು.
ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು ಎಂದು ಅವರು ಸೂಚನೆ ನೀಡಿದರು..

ವರದಿ. ಮಂಜುನಾಥ್ ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;