;

ಸಿಂಧನೂರು :ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಗುಂಡಿ ಬಿದ್ದರು ಎಚ್ಚೆತ್ತಕೊಳ್ಳದ ಅಧಿಕಾರಿಗಳು…!!!

ಸಿಂಧನೂರು :ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಗುಂಡಿ ಬಿದ್ದರು ಎಚ್ಚೆತ್ತಕೊಳ್ಳದ ಅಧಿಕಾರಿಗಳು.

ಬಸ್ ನಿಲ್ದಾಣಕ್ಕೆ ಸಮೀಪದ ನಗರಸಭೆ ವ್ಯಾಪ್ತಿಯಲ್ಲಿನ ಜನನಿ ಮಕ್ಕಳ ಆಸ್ಪತ್ರೆ ಬಳಿಯ ಮುಂಭಾಗದ ಮಧ್ಯಭಾಗದಲ್ಲಿ ಗುಂಡಿ ಬಿದ್ದಿರುವುದರಿಂದ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗಿದೆ.

ಅಧಿಕಾರಕ್ಕೆ ಬಂದ ಹೊಸತರದಲ್ಲಿ ಜನಪ್ರತಿನಿಧಿಗಳು ಮತ್ತು ಆಡಳಿತ ಮಂಡಳಿ ವಾರ್ಡಗಳಲ್ಲಿನ ಎಲ್ಲಾ ರಸ್ತೆಗಳನ್ನು ಮತ್ತು ಚರಂಡಿ ಸ್ವಚ್ಛಗೊಳಿಸುತ್ತೇವೆ. ಸಾರ್ವಜನಿಕರ ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತೇವೆ ಎಂದು ಸುಳ್ಳು ಭರವಸೆಗಳನ್ನು ನೀಡುತ್ತಾರೆ ಆದರೆ, ಕಾಲಕ್ರಮೇಣ ಕೊಟ್ಟ ಮಾತು ಮರೆತು ಸಾರ್ವಜನಿಕ ಕಾರ್ಯಗಳತ್ತ ಚಿತ್ತ ಹರಿಸದಿರುವುದು ಮಾತ್ರ ಬೇಸರದ ಸಂಗತಿಯಾಗಿದೆ.
ವಾರ್ಡ್‌ವಾರು ಅಭಿವದ್ಧಿಗೆ ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆಯಾಗುತ್ತಲೇ ಇರುತ್ತದೆ. ಆದರೆ, ಸಕಾಲಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕಾದವರು ಮಾತ್ರ ಅಭಿವದ್ಧಿಯತ್ತ ಮನಸ್ಸು ಮಾಡುತ್ತಿಲ್ಲ ಎನ್ನುವುದು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ. ತಿಂಗಳಿಂದ ರಸ್ತೆ ಮಧ್ಯೆ ಗುಂಡಿ ಬಿದ್ದು, ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ.ನಮ್ಮ ಆಸ್ಪತ್ರೆ ಆಡಳಿತ ಮಂಡಳಿಯಿಂದ ಒಂದೆರಡು ಬಾರಿ ಗುಂಡಿ ಮುಂಚಿದ್ದು, ಆದರೆ ಪದೇ ಪದೇ ಬೀಳುವುದರಿಂದ ಈ ಬಗ್ಗೆ ಸಂಬಂಧಿಸಿದವರ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ. ಎಂದು ಹೆಸರು ಹೇಳಲು ಇಚ್ಛಿಸದ ಆಸ್ಪತ್ರೆ ಸಿಬ್ಬಂದಿಯೊಬ್ಬರು ದೂರಿದ್ದಾರೆ. ಸಂಬಂಧಿಸಿದ ವಾರ್ಡ್ ಸದಸ್ಯರು ಕೂಡಲೇ ರಸ್ತೆಯಲ್ಲಿ ಬಿದ್ದ ಗುಂಡಿ ದುರಸ್ತಿಗೆ ಮುಂದಾಗಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕಿದೆ. ಎಷ್ಟರ ಮಟ್ಟಿಗೆ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಅನುಕೂಲಕ್ಕೆ ಸಹಾಯವಾಗುವರೋ ಕಾದು ನೋಡಬೇಕಿದೆ…

ವರದಿ.ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;