;

ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೊಗ್ಗಿನ ಮನಸಿನ ಬ್ಯೂಟಿ ಶುಭಾ ಪೂಂಜಾ…!!!

ಸದ್ದಿಲ್ಲದೆ ವೈವಸಹಿಕ ಜೀವನಕ್ಕೆ ಕಾಲಿಟ್ಡ ಮೊಗ್ಗಿನ ಮನಸಿನ ಬ್ಯೂಟಿ ಶುಭಾ ಪೂಂಜಾ

ಸ್ಯಾಂಡಲ್​ವುಡ್ ನ ಮೊಗ್ಗಿನ ಮನಸಿನ ಬ್ಯೂಟಿ ಶುಭಾ ಪೂಂಜಾ ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದ ಗೆಳೆಯ ಸುಮಂತ್ ಅವರ ಜೊತೆ ಸಿಂಪಲ್ ಆಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ ಕುಟುಂಬದವರು ಹಾಗು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ಕಾರ್ಯಕ್ರಮ ನಡೆಯಿತು. ಶುಭಾ ಮದುವೆಯಲ್ಲಿ ಬಿಗ್ ಬಾಸ್ ವಿಜೇತ ಮಂಜು ಪಾವಗಡ ಭಾಗವಹಿಸಿ ಶುಭ ಹಾರೈಸಿದರು.

ಈ ಕುರಿತು ಶುಭಾ ಪೂಂಜಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು, ಚಿತ್ರವನ್ನು ಹಂಚಿಕೊಂಡಿದ್ದಾರೆ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು. ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ’’ ಎಂದು ಶುಭಾ ಬರೆದುಕೊಂಡಿದ್ದಾರೆ.


​ವರದಿ. ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;