ಹರಪನಹಳ್ಳಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ N-95 ಮಾಸ್ಕ್ ಉಚಿತ ವಾಗಿ ವಿತರಿಸಿದ
ಎಂ,ಪಿ,ವೀಣಾ ಮಹಾಂತೇಶ್!
ಇಂದು ಹರಪನಹಳ್ಳಿ ಪಟ್ಟಣದ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ತಮ್ಮ ವಿಶೇಷ ಕಾಳಜಿ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರೀತಿಗೆ ಪೂರಕವಾಗಿ ಸ್ವಂತ ಖರ್ಚಿನಲ್ಲಿ ವಿಜಯವಾಣಿ ದಿನಪತ್ರಿಕೆಯಲ್ಲಿ ವಿಶೇಷವಾಗಿ ಪ್ರಕಟವಾಗುವ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ಮಕ್ಕಳ ಉತ್ತಮ ವಿಧ್ಯಾಭ್ಯಾಸಕ್ಕಾಗಿ ಅನುಕೂಲ ಆಗಲಿ ಎನ್ನುವ ದೃಷ್ಟಿಯಿಂದ ವಿತರಿಸಿ ಮಾನವೀಯ ಮೌಲ್ಯಗಳನ್ನು ಸಾರಿದ ಹರಪನಹಳ್ಳಿ ಕ್ಷೇತ್ರದ ಜನಪ್ರಿಯ ನಾಯಕಿ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಎಂ ಪಿ ವೀಣಾ ಮಹಾಂತೇಶ್ ಅವರು…
ಸ್ಥಳೀಯ ವಿಜಯವಾಣಿ ಪತ್ರಿಕಾ ವರದಿಗಾರರಾದ ಪಿ ಕರಿಬಸಪ್ಪ ಅವರು ವಿದ್ಯಾರ್ಥಿಗಳಿಗೆ ತಮ್ಮಿಂದ ಸಹಾಯಹಸ್ತ ಚಾಚುವ ನಿಟ್ಟಿನಲ್ಲಿ, ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚೆಚ್ಚು ವಿದ್ಯಾರ್ಜನೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ತಾವೂ ನೂರು ಜನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ಕೊಡುಗೆಯಾಗಿ ನೀಡಬೇಕು ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿದ ನಾನು ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಿಂದ, ಕೆಎಎಸ್, ಐಎಎಸ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿ ಎನ್ನುವುದನ್ನು ಮನಗಂಡು ಈ ಒಂದು ಪುಟ್ಟ ಸಹಾಯಕ್ಕೆ ಕೈಜೋಡಿಸಿದ್ದೇನೆ. ಇಂತಹ ಅನೂಕಲಕರ ಪತ್ರಿಕೆಯನ್ನು ತಾವೂ ಓದುವ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವನ್ನು ನಿರ್ಮಿಸಿಕೊಳ್ಳಿ ಎನ್ನುವುದಾಗಿ ಎಂ.ಪಿ ವೀಣಕ್ಕನವರು ವಿದ್ಯಾರ್ಥಿಗಳಲ್ಲಿ ಮನವಿ ಸಲ್ಲಿಸಿ, ನಿಮ್ಮ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭವಾಗಲಿ ಎಂದು ಹಾರೈಸಿ, ಶುಭಕೋರಿದರು..
ಹಾಗೆಯೇ, ಒಮೈಕ್ರೋನ್ ಖಾಯಿಲೆ ದಿನೇದಿನೇ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಅದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ…

ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
