ಸಿಂಧನೂರು :ಎಸ್.ಐ.ಒ. ಸಂಘಟನೆ ತಾಲೂಕು ವತಿಯಿಂದ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.
ತಾಲೂಕು ಮಿನಿ ವಿಧಾನಸೌಧದ ಗೇಟನಿಂದ ತಹಸೀಲ್ದಾರ ಕಾರ್ಯಲಯದವರೆಗೆ ಪ್ರತಿಭಟನೆ ಮೂಲಕ ದಿಕ್ಕಾರಗಳನ್ನು ಕೂಗುತ್ತಾ ತಹಸೀಲ್ದಾರ ಮನವಿ ಪತ್ರ ಸಲ್ಲಿಸಿದರು.
ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,183 ಉಪನ್ಯಾಸಕರು ಕಳೆದ ಕೆಲವು ದಿನಗಳಿಂದ ಭೋದನಾ ತರಗತಿಗಳನ್ನು ತೊರೆದು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.ಶಿಕ್ಷಣವು ಸಂವಿಧಾನದ ಮೂಲಭೂತ ಹಕ್ಕಾಗಿದೆ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,690 ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು ವಿದ್ಯಾರ್ಥಿಗಳಿಗೆ ಹೇಗೆ ತಾನೆ? ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿದೆ ಎಂಬುದನ್ನು ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕಾಗಿದೆ.ಅನೇಕ ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇ.55ರಷ್ಟು ಅಂಕಗಳನ್ನು ಪಡೆದಿದ್ದು,ಎನ್ಇಟಿ, ಎಸ್ಎಲ್ಇಟಿ ಅಥವಾ ಪಿ.ಎಚ್.ಡಿಪಡೆದುಕೊಂಡಿರುವ ಅತಿಥಿ ಉಪನ್ಯಾಸಕರಿಗೆ ರೂ.13,000 ಹಾಗೂ ಸ್ನಾತಕೋತ್ತರ ಎಂ.ಫಿಲ್ ಪದವೀಧರ ಅತಿಥಿ ಉಪನ್ಯಾಸಕರಿಗೆ ರೂ.11,000 ಗಳ ಮಾಸಿಕ ಗೌರವ ಸಂಭಾವನೆಯನ್ನು ನೀಡಲಾಗುತ್ತಿದೆ, ಈ ಅಲ್ಪವೇತನ ಪಡೆದುಕೊಂಡು ಇಂದಿನ ಹಣದುಬ್ಬರದ ದಿನಮಾನಗಳಲ್ಲಿ ಅತಿಥಿ ಉಪನ್ಯಾಸಕರು ಸಂಸಾರವನ್ನು ನಡೆಸಲು ತೀರಾ ಕಷ್ಟವನ್ನು ಎದುರಿಸುತ್ತಿದ್ದಾರೆ.ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಜೊತೆಗೆ ಉದ್ಯೋಗ ಭದ್ರತೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು,ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣವೇ ಉಪನ್ಯಾಸಕರ ಅಳಲಿಗೆ ಸ್ಪಂದಿಸಬೇಕೆಂದು ತಹಸೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ನೂರಮಹ್ಮದ, ಸಮ್ಮದಚೌದರಿ, ಮಹ್ಮದ್ ಹುಸೇನ್ ಪಾಷ, ಅನ್ವರ ಬಾಷ, ಮದಗಪ್ಪ, ಎಜಾಜ್, ಇಮಾದ, ಹರ್ಷದ್, ಸಿದ್ರಾಮೇಶ ಮುಕ್ಕುಂದಾ, ಚಿದಾನಂದಪ್ಪ ಅಮರಾಪೂರು ಇತರರಿದ್ದರು…
ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
