ರೈತರಿಗೆ ಎಲ್ಲಾ ವಿಷಯಗಳಲ್ಲಿ ಅನ್ಯಾಯವಾಗುತ್ತಿದೆ: ರವಿಕುಮಾರ್
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ ವಿವಿಧ ಬೇಡಿಕೆಗಳಿಗೆ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮುಖಾಂತರ ಮನವಿ ಸಲ್ಲಿಸಿ ಮಾತನಾಡಿದರು. ಭೀಮಾ ಯೋಜನೆ ಅಡಿಯಲ್ಲಿ ವಿಮೆ ಕಟ್ಟಿರುವ ರೈತರಿಗೆ ಇದುವರೆಗೆ ವಿಮೆ ಹಣ ಬಿಡುಗಡೆಯಾಗಿಲ್ಲ ಹಿಂದಿನ ವರ್ಷ ವಿಮೆ ಕಂಪನಿ ಬೆರಳೆಣಿಕೆ ರೈತರಿಗೆ ವಿಮೆ ನೀಡಿ ರೈತರಿಗೆ ಮೋಸ ಮಾಡಿದೆ ವಿಮೆ ಕಂಪನಿ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮರಲಹಳ್ಳಿ ರವಿಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ರೈತರಿಗೆ ಪರಿಹಾರ ಹಣ ನೀಡುವಲ್ಲಿ ತಾರತಮ್ಯವಾಗಿದ್ದು ಕೂಡಲೇ ರೈತರಿಗೆ ಪರಿಹಾರ ಹಣ ನೀಡಬೇಕು 2.3.5.ಎಕರೆ ಭೂಮಿ ಇರುವ ರೈತರ ಬಿ.ಪಿ.ಎಲ್. ಕಾರ್ಡುಗಳನ್ನು ವಜಾ ಮಾಡಿರುವುದನ್ನು ತಕ್ಷಣ ಸರಿಪಡಿಸಬೇಕು ಎಂದು ತಿಳಿಸಿದರು. ಅದೇರೀತಿ ಪಟ್ಟಣದಲ್ಲಿ ನೂತನವಾಗಿ ರಸ್ತೆ ಅಗಲೀಕರಣಕ್ಕೆ ಚಾಲನೆ ನೀಡಿರುವುದರಿಂದ ರಸ್ತೆಯಲ್ಲಿ ಬರುವ ಎಲ್ಲಾ ಸರ್ಕಲ್ ಗಳಿಗೆ ವಾಲ್ಮೀಕಿ, ಅಂಬೇಡ್ಕರ್, ಬಸವೇಶ್ವರ, ನಂಜುಂಡಸ್ವಾಮಿ, ಗಾಂಧೀಜಿ ಇವರ ಹೆಸರುಗಳನ್ನು ಇಡಬೇಕು ಮತ್ತು ಪ್ರತಿಭೆಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
